ಕೇಂದ್ರ ಸರ್ಕಾರ ಉಗ್ರರ ನಿರ್ನಾಮ ಮಾಡಲಿ

| Published : Apr 25 2025, 11:48 PM IST

ಸಾರಾಂಶ

ಸರ್ವಪಕ್ಷ ಸಭೆಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರು ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಸಹಮತವಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಸರ್ಕಾರ ಕಠಿಣ ಕ್ರಮಕೈಗೊಳ್ಳುವ ಮೂಲಕ ಉಗ್ರರ ನಿರ್ನಾಮ ಮಾಡಬೇಕು

ಕೊಪ್ಪಳ(ಯಲಬುರ್ಗಾ):

ಕಾಶ್ಮೀರದಲ್ಲಿ 26 ಪ್ರವಾಸಿಗರನ್ನು ಭಯೋತ್ಪಾದಕರು ಹತ್ಯೆ ಮಾಡಿರುವುದು ನೋವಿನ ಸಂಗತಿ. ಕೇಂದ್ರ ಸರ್ಕಾರ ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕರಿಬಸಪ್ಪ ನಿಡಗುಂದಿ ಹೇಳಿದರು.

ಯಲಬುರ್ಗಾ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಪಹಲ್ಗಾಮ್‌ನಲ್ಲಿ ಮೃತಪಟ್ಟವರಿಗೆ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಸರ್ವಪಕ್ಷ ಸಭೆಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರು ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಸಹಮತವಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಸರ್ಕಾರ ಕಠಿಣ ಕ್ರಮಕೈಗೊಳ್ಳುವ ಮೂಲಕ ಉಗ್ರರ ನಿರ್ನಾಮ ಮಾಡಬೇಕು ಎಂದರು.

ಈ ದಾಳಿ ನಿಜಕ್ಕೂ ಆತಂಕ ಹುಟ್ಟಿಸಿದೆ. ಇಂತಹ ದುಷ್ಕೃತ್ಯ ನಡೆಸಿದ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಠಿಣ ಕ್ರಮಕೈಗೊಂಡು ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಸುಧೀರ್ ಕೊರ್ಲಹಳ್ಳಿ ಮಾತನಾಡಿ, ಧರ್ಮಾಧಾರಿತದ ಮೇಲೆ ವ್ಯಕ್ತಿಗಳನ್ನು ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ. ನಮ್ಮದು ಜಾತ್ಯತೀತ ರಾಷ್ಟ್ರವಾಗಿದ್ದು ಇಲ್ಲಿ ಎಲ್ಲರೂ ಸಮಾನರು ಎಂದರು.

ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆನಂದ ಉಳ್ಳಾಗಡ್ಡಿ ಮಾತನಾಡಿ, ಯಾವುದೇ ಸರ್ಕಾರ ಅಧಿಕಾರದಲ್ಲಿದ್ದರೂ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಶಾಶ್ವತವಾಗಿ ಉಗ್ರರ ವಿರುದ್ಧ ಕ್ರಮಕೈಗೊಳ್ಳುವ ಮೂಲ ನಿರ್ನಾಮ ಮಾಡಬೇಕೆಂದು ಆಗ್ರಹಿಸಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರಣಪ್ಪ ಗಾಂಜಿ, ಕಾರ್ಯಾಧ್ಯಕ ಡಾ. ಶಿವನಗೌಡ ದಾನರೆಡ್ಡಿ, ರಹೇಮಾನಸಾಬ್‌ ಮಕ್ಕಪ್ಪನವರ, ವಕ್ತಾರ ಸಂಗಮೇಶ ಗುತ್ತಿ, ಮುಖಂಡರಾದ ಮಲ್ಲು ಜಕ್ಕಲಿ, ಹಂಪಯ್ಯಸ್ವಾಮಿ ಹಿರೇಮಠ, ರೇವಣೆಪ್ಪ ಹಿರೇಕುರುಬರ, ಸಂಗಣ್ಣ ತೆಂಗಿನಕಾಯಿ, ಹನುಮಂತ ಭಜಂತ್ರಿ, ರಹಮಾನ್‌ ನಾಯಕ, ಎಂ.ಎಫ್. ನದಾಫ್, ನಿಂಗಪ್ಪ ಕಮತರ, ಶರಣಗೌಡ ಬಸಾಪುರ, ಸಿದ್ದು ಪೊಲೀಸ್‌ಪಾಟೀಲ, ತಿಪ್ಪಣ್ಣ ಹಡಗಲಿ ಸೇರಿದಂತೆ ಇದ್ದರು.