ದ.ಕ. ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಕೇಂದ್ರದಿಂದ 42 ಕೋಟಿ ರು. ಅನುದಾನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

| Published : Sep 04 2024, 01:55 AM IST / Updated: Sep 04 2024, 12:17 PM IST

ದ.ಕ. ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಕೇಂದ್ರದಿಂದ 42 ಕೋಟಿ ರು. ಅನುದಾನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ
Share this Article
  • FB
  • TW
  • Linkdin
  • Email

ಸಾರಾಂಶ

ಅನುದಾನ ಬಿಡುಗಡೆಗೊಳಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಅಭಿನಂದಿಸುವುದಾಗಿ ಸಂಸದರು ತಿಳಿಸಿದ್ದಾರೆ.

 ಮಂಗಳೂರು : ದ.ಕ. ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಟ್ಟು ೪೨ ಕೋಟಿ ರು. ಅನುದಾನ ಬಿಡುಗಡೆಗೊಳಿಸಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಈ ಅನುದಾನ ನೀಡಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು ೭೪.೩೦ ಕಿಲೋ ಮೀಟರ್ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ಈ ಎಲ್ಲ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೊಳಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಅಭಿನಂದಿಸುವುದಾಗಿ ಸಂಸದರು ತಿಳಿಸಿದ್ದಾರೆ.