ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕೋಡಿಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ ಶಿಂಧೆ ಅವರು ಮೇ.1 ರಂದು ಅಂಚೆ ಮತದಾನದ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಕನ್ನಡಪ್ರಭ ವಾರ್ತೆ ಚಿಕ್ಕೋಡಿಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ ಶಿಂಧೆ ಅವರು ಮೇ.1 ರಂದು ಅಂಚೆ ಮತದಾನದ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಈ ವೇಳೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳಡಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮತದಾನದ ಮೂಲಕ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಮತದಾನ ಮಾಡಲು ಚಿಕ್ಕೋಡಿ ತಹಸೀಲ್ದಾರ್ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.ಮೇ.1 ರಿಂದ 3 ರವರೆಗೆ ಅಗತ್ಯ ಸೇವೆಗಳಡಿ ಬರುವ ನೌಕರರು ಮತಗಟ್ಟೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯೊಳಗಾಗಿ ಆಗಮಿಸಿ ತಪ್ಪದೇ ಮತ ಚಲಾಯಿಸುವಂತೆ ಕೋರಿದರು. ಚಿಕ್ಕೋಡಿ ಉಪವಿಭಾಗಾಧಿಕಾರಿ ಮೆಹಬೂಬಿ ಸೇರಿದಂತೆ ತರಬೇತಿಗೆ ಆಗಮಿಸಿದ ಮತಗಟ್ಟೆ ಅಧಿಕಾರಿ, ಸಿಬ್ಬಂದಿ ಅಂಚೆ ಮತದಾನದ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು. ಚಿಕ್ಕೋಡಿ ತಹಸೀಲ್ದಾರ್ ಚಿದಂಬರ ಕುಲಕರ್ಣಿ ಇದ್ದರು.