ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ನನದಿಯ ಕನ್ನಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಪಿ.ಸಿ.ಪಾಯಣ್ಣವರ ಅವರು ಮೇ.31 ರಂದು ವಯೋನಿವೃತ್ತರಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು.
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ನನದಿಯ ಕನ್ನಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಪಿ.ಸಿ.ಪಾಯಣ್ಣವರ ಅವರು ಮೇ.31 ರಂದು ವಯೋನಿವೃತ್ತರಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು.ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಚುನಾವಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿ.ಸಿ.ಪಾಯಣ್ಣವರ ಅವರಿಗೆ ಚುನಾವಣಾಧಿಕಾರಿ ರಾಹುಲ ಶಿಂಧೆ ಅವರು ಸನ್ಮಾನಿಸಿ ಗೌರವಿಸಿದರು. ಬಳಿಕ ಚುನಾವಣಾಧಿಕಾರಿ ರಾಹುಲ ಶಿಂಧೆ ಮಾತನಾಡಿ, ಪಿ.ಸಿ.ಪಾಯಣ್ಣವರ ಅವರ ಸುಧೀರ್ಘ 44 ವರ್ಷಗಳ ಕಾಲ ಸೇವೆ ಶ್ಲಾಘನೀಯ. ಲೋಕಸಭಾ ಚುನಾವಣೆ ಘೋಷಣೆಯಾದಾಗಿನಿಂದ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಅವರ ಸೇವೆ ಅತ್ಯಂತ ತೃಪ್ತಿದಾಯಕವಾಗಿತ್ತು. ಚುನಾವಣೆಗೆ ಸಂಬಂಧಿಸಿದ ಎಲ್ಲ ಕಾರ್ಯಗಳನ್ನೂ ನಗು ಮೊಗದಿಂದಲೇ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದ ಅವರ ಕಾರ್ಯವೈಖರಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು ಎಂದು ತಿಳಿಸಿದರು.
ಸಹಾಯಕ ಚುನಾವಣಾಧಿಕಾರಿ ಬಸವರಾಜ ಅಡವಿಮಠ ಸೇರಿದಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.