ಸಾರಾಂಶ
ದೊಡ್ಡಬಳ್ಳಾಪುರ: ಸರ್ಕಾರ ಶಾಲಾ ಮಕ್ಕಳಿಗೆ ಉಚಿತ ಗುಣಮಟ್ಟದ ಶಿಕ್ಷಣದ ಜೊತೆಗೆ ಮಧ್ಯಾಹ್ನದ ಪೌಷ್ಟಿಕ ಆಹಾರದೊಂದಿಗೆ ವಾರದ 6 ದಿನವೂ ಮೊಟ್ಟೆ ವಿತರಣೆ ಮಾಡುತ್ತಿದೆ. ಈ ಕಾರ್ಯಕ್ರಮ ಮಕ್ಕಳಲ್ಲಿನ ಅಪೌಷ್ಟಿಕತೆಯ ಕೊರತೆಯನ್ನು ನಿವಾರಿಸಲು ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ. ಕೆ.ಎನ್ ಅನುರಾಧ ಹೇಳಿದರು.

ಬೆಟ್ಟಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ 2024-25ನೇ ಸಾಲಿನ ಮಧ್ಯಾಹ್ನದ ಉಪಾಹಾರ ಯೋಜನೆಯಡಿ ಆಜೀಂ ಪ್ರೇಮ್ ಜೀ ಫೌಂಡೇಶನ್‌ನ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುವ 2 ದಿನಗಳ ಜೊತೆಗೆ ಹೆಚ್ಚುವರಿ 4 ದಿನಗಳು ಸೇರಿ ವಾರದ 6 ದಿನವೂ ಪೌಷ್ಟಿಕ ಆಹಾರದ ಜೊತೆಗೆ ಮೊಟ್ಟೆ ವಿತರಿಸಲಾಗುವುದು. ಈ ಯೋಜನೆಯ ಅಡಿಯಲ್ಲಿ ಜಿಲ್ಲೆಯಾದ್ಯಂತ 64,934 ಮಕ್ಕಳು ಪ್ರಯೋಜನ ಪಡೆಯುತ್ತಿದ್ದಾರೆ. ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಬಿ. ರಾಜಣ್ಣ, ಜಿಪಂ ಮಾಜಿ ಉಪಾಧ್ಯಕ್ಷೆ ಅನಂತಕುಮಾರಿ ಚಿನ್ನಪ್ಪ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ತಹಸೀಲ್ದಾರ್ ಬಾಲಕೃಷ್ಣ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀನಾಥಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಸುಮಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಧಾ ಉಪಸ್ಥಿತರಿದ್ದರು.