ಚೆಕ್‌ಪೋಸ್ಟ್‌ಗಳಿಗೆ ಸಿಇಒ ಕುರೇರ ಭೇಟಿ, ಪರಿಶೀಲನೆ

| Published : Apr 25 2024, 01:12 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿ, ವಿವಿಧ ಮತಗಟ್ಟೆ, ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯ ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕು ವ್ಯಾಪ್ತಿಯಲ್ಲಿ ನಡೆದ ವಿವಿಧ ಕಾಮಗಾರಿ, ವಿವಿಧ ಮತಗಟ್ಟೆ, ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಮಖಂಡಿ ತಾಲೂಕಿನ ಸಾವಳಗಿಯ ಹತ್ತಿ ತೋಟ ನಂ.1 ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಕಾಮಗಾರಿ, ಬಿಸಿಯೂಟ ಪರಿಶೀಲನೆ ನಡೆಸಿದರು. ಹಿರೇಪಡಸಲಗಿ ಗ್ರಾಪಂ ವ್ಯಾಪ್ತಿಯ ಕೋಟ್ಯಾಳ ವಸತಿ ಗ್ರಾಮದ ಶಾಲಾ ಕಟ್ಟಡ ಕಾಮಗಾರಿ ವೀಕ್ಷಣೆ, ಅಂಗನವಾಡಿ ಕೇಂದ್ರ ಭೇಟಿ ನಂತರ ಡಿಜಿಟಲ್ ಗ್ರಂಥಾಲಯ ವೀಕ್ಷಣೆ ಮಾಡಿದರು.

ತೊದಲಬಾಗಿ ಮತ್ತು ಜಮಖಂಡಿ ನಗರದಲ್ಲಿರುವ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ವಿಶೇಷ ಮತಗಟ್ಟೆಗೆ ಭೇಟಿ ನೀಡಿ ಚಿತ್ರಕಲೆ ವೀಕ್ಷಣೆ ಮಾಡಿದರು. ಅಲ್ಲದೇ ಚಿಕ್ಕಲಕಿ ಮತ್ತು ಹುನ್ನೂರ ಚೆಕ್‌ಪೋಸ್ಟ್‌ಗಳಿಗೆ ತೆರಳಿ ವಾಹನ ತಪಾಸಣೆ ಕಾರ್ಯ ನಡೆಸಿ, ಮಾಹಿತಿ ಪಡೆದುಕೊಂಡರು. ರಬಕವಿ ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಾಕ್‌ವೆಲ್‌ ಕಾಮಗಾರಿ ಕೂಡ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಜಮಖಂಡಿ ತಹಶೀಲ್ದಾರ ಸದಾಶಿವ ಮಕ್ಕೋಜಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.