ಆರೋಗ್ಯಕ್ಕಾಗಿ ಸಮಯ ಮೀಸಲಿಡಲು ಸಿಇಒ ಪೂರ್ಣಿಮಾ

| Published : Jul 26 2025, 12:30 AM IST

ಸಾರಾಂಶ

ಪ್ರತಿಯೊಬ್ಬರು ಆರೋಗ್ಯಕ್ಕಾಗಿ ಪ್ರತಿ ದಿನ ೪೫ ನಿಮಿಷ ನಡಿಗೆ, ೨೦ ನಿಮಿಷ ಯೋಗಾಭ್ಯಾಸ ಅಥವಾ ವ್ಯಾಯಾಮ ಮಾಡಬೇಕು ಜನರು ಜೀವನ ಶೈಲಿ ಹಾಗೂ ಆಹಾರ ಸೇವನೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ತಿಳಿಸಿದ್ದಾರೆ. ಆಧುನಿಕ ಜೀವನ ಶೈಲಿಯಿಂದ ಹೃದಯ ಆರೋಗ್ಯದ ಕಡೆ ಗಮನಹರಿಸಬೇಕಿದೆ, ರಾಜ್ಯ ಸರ್ಕಾರ ಗೃಹ ಆರೋಗ್ಯ ಕಾರ್ಯಕ್ರಮದಡಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಅವಶ್ಯಕವಿರುವ ಚಿಕಿತ್ಸೆಯನ್ನು, ಮಾತ್ರೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಪ್ರತಿಯೊಬ್ಬರು ಆರೋಗ್ಯಕ್ಕಾಗಿ ಪ್ರತಿ ದಿನ ೪೫ ನಿಮಿಷ ನಡಿಗೆ, ೨೦ ನಿಮಿಷ ಯೋಗಾಭ್ಯಾಸ ಅಥವಾ ವ್ಯಾಯಾಮ ಮಾಡಬೇಕು ಜನರು ಜೀವನ ಶೈಲಿ ಹಾಗೂ ಆಹಾರ ಸೇವನೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ತಿಳಿಸಿದ್ದಾರೆ.

ಹೃದಯ ಸಂಬಂಧಿ ಖಾಯಿಲೆಗಳಿಂದ ಸಾವನಪ್ಪುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಹೇಮಾವತಿ ಪ್ರತಿಮೆಯ ಬಳಿ ಮೊಬೈಲ್ ಲೈಟ್ ಕ್ಯಾಂಪೇನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಒಂದು ದಿನದ ಅರಿವು ಕಾರ್ಯಕ್ರಮ ಆಗಬಾರದು ಪ್ರತಿ ದಿನ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು ಎಂದರು. ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಜಿಲ್ಲೆಯ ಒಂದರಿಂದ ಹತ್ತನೇ ತರಗತಿಯಲ್ಲಿ ೧.೯೦ ಲಕ್ಷ ಮಕ್ಕಳಲ್ಲಿ ೧ ಲಕ್ಷ ಮಕ್ಕಳಿಗೆ ಈಗಾಗಲೇ ತಪಾಸಣೆ ಮಾಡಲಾಗಿದೆ ಎಂದರು.ಆಧುನಿಕ ಜೀವನ ಶೈಲಿಯಿಂದ ಹೃದಯ ಆರೋಗ್ಯದ ಕಡೆ ಗಮನಹರಿಸಬೇಕಿದೆ, ರಾಜ್ಯ ಸರ್ಕಾರ ಗೃಹ ಆರೋಗ್ಯ ಕಾರ್ಯಕ್ರಮದಡಿ ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದು, ಅವಶ್ಯಕವಿರುವ ಚಿಕಿತ್ಸೆಯನ್ನು, ಮಾತ್ರೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಹೆಚ್.ಎಲ್.ಮಲ್ಲೇಶಗೌಡ ಅವರು ಮಾತನಾಡಿ, ಯುವ ಜನತೆಯಲ್ಲಿ ಹೃದಯಾಘಾತದಿಂದ ಮರಣ ಹೊಂದುತ್ತಿರುವುದು ಕಂಡುಬರುತ್ತಿದೆ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಯುವ ಪೀಳಿಗೆ ಮನೆಯಲ್ಲಿ ತಯಾರಿಸುವ ಆಹಾರ ಸೇವನೆ ಮಾಡುವುದಕ್ಕೆ ಆದ್ಯತೆ ನೀಡಿ ಜೊತೆಗೆ ಮೊಬೈಲ್ ಅನ್ನು ಮಿತವಾಗಿ ಬಳಕೆ ಮಾಡುವುದನ್ನು ರೂಢಿಸಿಕೊಳ್ಳಿ. ವಯಸ್ಸಾದ ನಾಗರಿಕರು ಕೂಡ ತಾವು ಸೇವಿಸುವ ಆಹಾರ ಗಮನಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅನಿಲ್ ಕುಮಾರ್, ಹಿಮ್ಸ್ ನಿರ್ದೇಶಕರಾದ ಡಾ. ರಾಜಣ್ಣ, ಲಯನ್ಸ್, ರೋಟರಿ ರೆಡ್‌ಕ್ರಾಸ್, ಎಸ್‌ಡಿಎಂ ಕಾಲೇಜು, ಜಿಲ್ಲಾ ಸಾಹಿತ್ಯ ಪರಿಷತ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.