ಹಳ್ಳಿಗಳಲ್ಲಿನ ಕಾಮಗಾರಿ ಪರಿಶೀಲಿಸಿದ ಸಿಇಒ ರಿಷಿ

| Published : Jul 07 2025, 11:48 PM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮ ಪಂಚಾಯತಿಗೆ ಸಿಇಒ ರಿಷಿ ಆನಂದ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣವಾದ ಎನ್.ಆರ್.ಎಲ್.ಎಂ ಸಂಜೀವಿನಿ ಶೆಡ್ ಕಟ್ಟಡ ಹಾಗೂ ನೂತನ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ ಕಟ್ಟಡಕ್ಕೆ ವೀಕ್ಷಿಸಿದ ಅವರು ಕಟ್ಟಡ ನಿರ್ಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಗ್ರಂಥಾಲಯ ಪೂರ್ಣಗೊಂಡ ತಕ್ಷಣವೇ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮ ಪಂಚಾಯತಿಗೆ ಸಿಇಒ ರಿಷಿ ಆನಂದ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣವಾದ ಎನ್.ಆರ್.ಎಲ್.ಎಂ ಸಂಜೀವಿನಿ ಶೆಡ್ ಕಟ್ಟಡ ಹಾಗೂ ನೂತನ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ ಕಟ್ಟಡಕ್ಕೆ ವೀಕ್ಷಿಸಿದ ಅವರು ಕಟ್ಟಡ ನಿರ್ಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಗ್ರಂಥಾಲಯ ಪೂರ್ಣಗೊಂಡ ತಕ್ಷಣವೇ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ತಿಳಿಸಿದರು.ಗ್ರಂಥಾಲಯಗಳಿಗೆ ಬರುವ ವಿದ್ಯಾರ್ಥಿಗಳು ಹಾಗೂ ಓದುಗರಿಗೆ ಅನುಕೂಲವಾಗುವಂತೆ ಐಎಎಸ್, ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಾಯಕವಾಗುವ ಪುಸ್ತಕಗಳನ್ನು ಖರೀದಿಸಿ ಇಡಬೇಕು. ಗ್ರಂಥಾಲಯಕ್ಕೆ ಉತ್ತಮ ಗುಣಮಟ್ಟದ ಮತ್ತು ಆಕರ್ಷಕ ಪೇಂಟಿಂಗ್ ಮಾಡಿಸಬೇಕು ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮದ ಮುಖ್ಯ ರಸ್ತೆಗೆ ಗ್ರಂಥಾಲಯದ ನಾಮಫಲಕವನ್ನು ಅಳವಡಿಸಬೇಕು ಎಂದು ಪಿಡಿಒಗೆ ಸೂಚಿಸಿದರು. ನಿಡೋಣಿ ಗ್ರಾಮ ಪಂಚಾಯತಿ ವತಿಯಿಂದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕುರ್ಚಿ ಮತ್ತು ಬೆಂಚ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಲ್ಲದೇ, ಮಕ್ಕಳೊಂದಿಗೆ ಸಂವಾದ ನಡೆಸಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ವಿತರಣೆ, ಆಟ, ಪಾಠ ಯೋಗಕ್ಷೇಮ ಕುರಿತು ಮಾಹಿತಿ ಪಡೆದುಕೊಂಡರು.ನಿಡೋಣಿಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಕೇಂದ್ರದಲ್ಲಿ ಕಲ್ಪಿಸಲಾಗಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಮಕ್ಕಳಿಗೆ ವಿತರಣೆ ಮಾಡಿದ ಪೀಠೋಪಕರಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಅಂಗನವಾಡಿ ಕೇಂದ್ರದ ಸುತ್ತ - ಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು. ಮಕ್ಕಳ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು, ರೋಗ - ರುಜಿನುಗಳು ಬರದ ಹಾಗೆ ಅಂಗನವಾಡಿಗಳ ಸುತ್ತ ಮುತ್ತ ಸ್ವಚ್ಛತೆ ಕಾಯ್ದುಕೊಂಡಲ್ಲಿ ಎಲ್ಲ ಮಕ್ಕಳು ಆರೋಗ್ಯವಂತರಾಗಿರಲು ಸಾಧ್ಯ. ಮಕ್ಕಳ ಕಲಿಕಾ ಸಾಮರ್ಥ್ಯದ ಗುಣಮಟ್ಟ ಹೆಚ್ಚಳವಾಗುವಂತೆ ಕಲಿಕೆಗೆ ಹೆಚ್ಚಿನ ಆಧ್ಯತೆ ನೀಡಬೇಕು. ಅಡುಗೆ ಕೊಠಡಿಯಲ್ಲಿ ಪ್ರತಿನಿತ್ಯ ಶುಚಿತ್ವ ಕಾಪಾಡಬೇಕು. ಕಡ್ಡಾಯವಾಗಿ ಪ್ರತಿದಿನ ಸಿಬ್ಬಂದಿ ಹಾಗೂ ಮಕ್ಕಳ ಹಾಜರಾತಿ ನಿರ್ವಹಣೆ ಮಾಡಬೇಕು. ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ ಹಾಗೂ ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದು ಮತ್ತು ಮಕ್ಕಳಿಗೆ ಸಮಯಾನುಸಾರ ಪೌಷ್ಠಿಕ ಆಹಾರ ವಿತರಣೆಗೆ ಕ್ರಮಕೈಗೊಳ್ಳುವಂತೆ ಸಿಡಿಪಿಒ ಅವರಿಗೆ ಸೂಚನೆ ನೀಡಿದರು.ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಒಕ್ಕೂಟದ ಸದಸ್ಯರೊಂದಿಗೆ ಸಂಘದ ಉಳಿತಾಯ, ಸ್ವ-ಉದ್ಯೋಗ ಮತ್ತು ಸಾಲ ಸೌಲಭ್ಯದಿಂದ ಸಂಘಗಳಿಗೆ ಅನುಕೂಲವಾಗಿರುವ ಬಗ್ಗೆ ಹಾಗೂ ಮಹಿಳಾ ಸಬಲೀಕರಣ ಕುರಿತು ಚರ್ಚೆ ನಡೆಸಿದರು.