ದಡ್ಡಿ ಚೆಕ್‌ಪೋಸ್ಟ್‌ಗೆ ಸಿಇಒ ದಿಢೀರ್ ಭೇಟಿ

| Published : Apr 02 2024, 01:06 AM IST

ಸಾರಾಂಶ

ಹುಕ್ಕೇರಿ: ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ದಡ್ಡಿ ಕ್ರಾಸ್ ಬಳಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ಗೆ ಬೆಳಗಾವಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ: ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ದಡ್ಡಿ ಕ್ರಾಸ್ ಬಳಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ಗೆ ಬೆಳಗಾವಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅನೀರಿಕ್ಷಿತ ಭೇಟಿ ನೀಡಿದ ಸಿಇಒ ರಾಹುಲ್ ಶಿಂಧೆ ಅವರು, ಈ ಚೆಕ್‌ಪೋಸ್ಟ್‌ ಮೂಲಕ ಹಾದು ಹೋಗಿರುವ ವಾಹನಗಳ ಪಟ್ಟಿ, ಚೆಕ್ ಪೋಸ್ಟ್ ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸನೆ ಮಾಡುವಂತೆ ಸಿಬ್ಬಂದಿಗೆ ಸೂಚಿಸಿದರು. ಹಣ, ಹೆಂಡ ಸೇರಿದಂತೆ ಮತದಾರರಿಗೆ ಆಮಿಷವೊಡ್ಡುವ ವಸ್ತುಗಳ ಸಾಗಾಟ ಮತ್ತು ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಎಚ್ಚರಿಕೆ ನೀಡಿದರು.

ಸಹಾಯಕ ನಿರ್ದೇಶಕ ಪಿ.ಲಕ್ಷ್ಮೀನಾರಾಯಣ, ರಾಜು ಢಾಂಗೆ, ಪಿಡಿಒ ಮಹಾದೇವ ಪೂಜೇರಿ, ಮಹಾಂತೇಶ ಬಾದವಾನಮಠ, ಪೊಲೀಸ್ ಮತ್ತು ಅಬಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.