ಚೆಕ್‌ಪೋಸ್ಟ್‌ಗೆ ಸಿಇಒ ಭೇಟಿ, ಪರಿಶೀಲನೆ

| Published : Mar 26 2024, 01:17 AM IST

ಸಾರಾಂಶ

ವಿಜಯಪುರ: ಲೋಕಸಭಾ ಚುನಾವಣೆ 2024ರ ಹಿನ್ನೆಲೆ ನಿಡಗುಂದಿ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 50ರ ಹತ್ತಿರ ಯಲಗೂರ ಕ್ರಾಸ್ ಬಳಿ ಚೆಕ್‌ಪೋಸ್ಟ್ ಆರಂಭಿಸಲಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲು ಜಿಲ್ಲಾ ಗಡಿ ಭಾಗ ಚೆಕ್‌ಪೋಸ್ಟ್ ಇದಾಗಿದ್ದು, ಕಂದಾಯ, ಪೊಲೀಸ್, ಕೆಬಿಜೆಎನ್‌ಎಲ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಲೋಕಸಭಾ ಚುನಾವಣೆ 2024ರ ಹಿನ್ನೆಲೆ ನಿಡಗುಂದಿ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 50ರ ಹತ್ತಿರ ಯಲಗೂರ ಕ್ರಾಸ್ ಬಳಿ ಚೆಕ್‌ಪೋಸ್ಟ್ ಆರಂಭಿಸಲಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯಪುರ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲು ಜಿಲ್ಲಾ ಗಡಿ ಭಾಗ ಚೆಕ್‌ಪೋಸ್ಟ್ ಇದಾಗಿದ್ದು, ಕಂದಾಯ, ಪೊಲೀಸ್, ಕೆಬಿಜೆಎನ್‌ಎಲ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಭೇಟಿ ನೀಡಿದ ವೇಳೆ ಮಾತನಾಡಿದ ಜಿಪಂ ಸಿಇಒ ರಿಷಿ ಆನಂದ ಲೋಕಸಭೆ ಚುನಾವಣಾ ನಿಮಿತ್ಯ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಜಿಲ್ಲೆಯಿಂದ ಹೊರಹೋಗುವ ಮತ್ತು ಆಗಮಿಸುವ ಎಲ್ಲ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸಬೇಕು. ಹಣ, ಮದ್ಯ, ದಾಖಲೆ ಇಲ್ಲದ ವಸ್ತುಗಳು ಕಂಡುಬಂದರೆ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತಂದು ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತಿ ವಾಹನ ತಪಾಸಣೆ ಮಾಡಿದ ವರದಿಯನ್ನು ವಹಿಯಲ್ಲಿ ದಾಖಲಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.

ಚೆಕ್ ಪೋಸ್ಟ್ ವಹಿಯಲ್ಲಿ ನೋಂದಣಿ ಮಾಡಿದ ವಾಹನಗಳ ವಿವರಗಳನ್ನು ಖುದ್ದಾಗಿ ಪರಿಶೀಲಿಸಿದರು. ಚೆಕ್ ಪೋಸ್ಟ್ ಸಿಬ್ಬಂದಿ ಉಪಸ್ಥಿತರಿದ್ದರು.