ಚನ್ನಪಟ್ಟಣ: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಬೊಂಬೆನಾಡ ಗಂಗೋತ್ಸವಕ್ಕೆ ಶುಕ್ರವಾರ ಬೆಳಗ್ಗೆ ೬ ಗಂಟೆಗೆ ಯೋಗಾಸನ ಶಿಬಿರಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು.
ಚನ್ನಪಟ್ಟಣ: ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಬೊಂಬೆನಾಡ ಗಂಗೋತ್ಸವಕ್ಕೆ ಶುಕ್ರವಾರ ಬೆಳಗ್ಗೆ ೬ ಗಂಟೆಗೆ ಯೋಗಾಸನ ಶಿಬಿರಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು.
ಬೊಂಬೆನಾಡ ಗಂಗೋತ್ಸವದ ಮೊದಲ ದಿನ ಯೋಗಾಸನ ಶಿಬಿರ, ವಿಜ್ಞಾನ ಮೇಳ, ವೇಷಭೂಷಣ ಸಹಿತ ರಂಗಗೀತೆಗಳ ಗಾಯನ, ವಾಯ್ಸ್ ಆಫ್ ಬೊಂಬೆನಾಡು, ವೇಷಭೂಷಣ ಸ್ಪರ್ಧೆ, ದಂಪತಿಗೆ ಭಾರತೀಯ ಸಂಪ್ರದಾಯದ ಉಡುಗೆಯೊಂದಿಗೆ ಪ್ರದರ್ಶನ ಸ್ಪರ್ಧೆ ಹಾಗೂ ಚಲನಚಿತ್ರಗೀತೆಗಳ ಸಮೂಹ ನೃತ್ಯ ನೆರವೇರಿತು.ವಿಜ್ಞಾನ ಮೇಳ:
ಬೊಂಬೆನಾಡ ಗಂಗೋತ್ಸದ ಪ್ರಯುಕ್ತ ಆಯೋಜಿಸಿದ್ದ ವಿಜ್ಞಾನ ಮೇಳದಲ್ಲಿ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜ್ಞಾನ ಮೇಳದಲ್ಲಿ ವಿದ್ಯಾರ್ಥಿಗಳು ತಾವೇ ತಯಾರಿಸಿದ ನೂರಾರು ಬಗೆಯ ವೈಜ್ಞಾನಿಕ ಮಾದರಿಗಳನ್ನು ಪ್ರದರ್ಶಿಸಿದರು. ಮೇಳ ವೀಕ್ಷಿಸಲು ಬಂದವರಿಗೆ ಮಾದರಿಗಳ ಕುರಿತು ಮಾಹಿತಿ ನೀಡಿದರು.ವೇಷಭೂಷಣ ಸಹಿತ ರಂಗಗೀತೆಗಳ ಗಾಯನ, ವಾಯ್ಸ್ ಆಫ್ ಬೊಂಬೆನಾಡು, ವೇಷಭೂಷಣ ಸ್ಪರ್ಧೆ, ಚಲನಚಿತ್ರ ಗೀತೆಗಳ ಸಮೂಹ ನೃತ್ಯ ಪ್ರದರ್ಶನದಲ್ಲಿ ಆಸಕ್ತಿಯಿಂದ ಭಾಗವಹಿಸಿದ ಮಕ್ಕಳು ತಮ್ಮ ಕಲೆಯನ್ನು ಪ್ರದರ್ಶಿಸಿದರು.
ಬೊಂಬೆನಾಡ ಗಂಗೋತ್ಸವದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಮಾಹಿತಿ ಕೇಂದ್ರಗಳನ್ನು ತೆರೆಯಲಾಗಿತ್ತು.ಸಿಂಗಾರಗೊಂಡ ಬೊಂಬೆನಾಡು:
ಬೊಂಬೆನಾಡ ಗಂಗೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕ್ರೀಡೆ, ಕಲೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ನಗರಸಭೆಯಿಂದ ಪಟ್ಟಣದ ಹೆದ್ದಾರಿ ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗಿತ್ತು. ಪಟ್ಟಣದ ಬೆಂಗಳೂರು ಮೈಸೂರು ಹೆದ್ದಾರಿಯ ಹನುಮಂತನಗರದಿಂದ ಚಿಕ್ಕಮಳೂರುವರೆಗೆ ಹಾಗೂ ಮಹದೇಶ್ವರನಗರದಿಂದ ಎಲೇಕೇರಿವರೆಗೆ ಹಾಗೂ ಅಂಚೆ ಕಚೇರಿ ರಸ್ತೆ, ಎಂಜಿ ರಸ್ತೆ, ಜಿ.ಸಿ.ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.ಆಹಾರ ವ್ಯವಸ್ಥೆ:
ಗಂಗೋತ್ಸವದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ತಿಂಡಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಮೈದಾನದಲ್ಲಿ ಒಂದು ಬದಿಯಲ್ಲಿ ಐದಾರು ಕೌಂಟರ್‌ಗಳನ್ನ ತೆರೆದು ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಪರ್ಧಿಗಳು, ಕಲಾವಿದರು ಹಾಗೂ ಸಾರ್ವಜನಿಕರಿಗೆ ಊಟ ಹಾಗೂ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಗಂಗೋತ್ಸವದ ಹಿನ್ನೆಲೆಯಲ್ಲಿ ಬಾಲಕರ ಸರ್ಕಾರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.ಬಾಕ್ಸ್........................
ನಾಳಿನ ಕಾರ್ಯಕ್ರಮಬೊಂಬೆನಾಡ ಗಂಗೋತ್ಸವದ ಹಿನ್ನೆಲೆಯಲ್ಲಿ ಶನಿವಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಶನಿವಾರ ಬೆಳಗ್ಗೆ 6 ಗಂಟೆಗೆ ಮ್ಯಾರಥಾನ್ ಓಟ, ೯ಗಂಟೆಯಿಂದ ಕಬಡ್ಡಿ, ವಾಲಿಬಾಲ್, ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಿಫೈನಲ್ ಮತ್ತು ಫೈನಲ್ ಪಂದ್ಯಗಳು, ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಮಹಿಳೆಯರಿಗೆ ಕೇಶ ವಿನ್ಯಾಸ ಸ್ಪರ್ಧೆ, ಜಾನಪದ-ದೇಶಭಕ್ತಿ ಗೀತೆಗಳ ಸಮೂಹ ನೃತ್ಯ ನಡೆಲಿದೆ. ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ ೧ರಿಂದ ೪ನೇ ತರಗತಿ, ೫ರಿಂದ ೭ನೇ ತರಗತಿ ಮತ್ತು ೮ರಿಂದ ೧೦ತರಗತಿ ವಿಭಾಗದಲ್ಲಿ ನಡೆಯಲಿದೆ. ಶನಿವಾರ ಮಧ್ಯಾಹ್ನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.೭೦ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.ಪೊಟೋ೨೩ಸಿಪಿಟಿ೧:
ಚನ್ನಪಟ್ಟಣದಲ್ಲಿ ಬೊಂಬೆನಾಡ ಗಂಗೋತ್ಸವದಲ್ಲಿ ಯೋಗಾಸನ ನಡೆಸಿದ ಯೋಗಪಟುಗಳು.ಪೊಟೋ೨೩ಸಿಪಿಟಿ೨:
ಬೊಂಬೆನಾಡ ಗಂಗೋತ್ಸದಲ್ಲಿ ಆಯೋಜಿಸಿದ್ದ ವಿಜ್ಞಾನ ಮೇಳದಲ್ಲಿ ವಿದ್ಯಾರ್ಥಿಗಳು ವಿವಿಧ ಮಾದರಿಗಳನ್ನು ಪ್ರದರ್ಶಿಸಿದರು.ಪೊಟೋ೨೩ಸಿಪಿಟಿ೩:
ಬೊಂಬೆನಾಡ ಗಂಗೋತ್ಸದಲ್ಲಿ ಭಾಗವಹಿಸಿದ್ದ ಆಶಾ ಕಾರ್ಯಕರ್ತೆಯರು.