ಸಾರಾಂಶ
ಚುಂಚಾದ್ರಿ ಮತ್ತು ಆದಿಶಕ್ತಿ ಸಭಾ ಭವನದಲ್ಲಿ 80ಕ್ಕೂ ಹೆಚ್ಚು ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಿಂದ 1 ಸಾವಿರಕ್ಕೂ ಹೆಚ್ಚು ವಿಜ್ಞಾನ, ತಂತ್ರಜ್ಞಾನ ಹಾಗೂ ಆಧ್ಯಾತ್ಮಿಕ ಮಳಿಗೆಗಳು ತೆರೆದಿದ್ದು, ಹಲವು ಮೇಳ ವೀಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದವು. ಮಂಗಳವಾರವೂ ಸಹ ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೇಳವನ್ನು ವೀಕ್ಷಣೆ ಮಾಡಿದರು.
ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಆದಿಚುಂಚನಗಿರಿಯಲ್ಲಿ ನಡೆದ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 11ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ನಡೆದ ಜ್ಞಾನ-ವಿಜ್ಞಾನ-ತಂತ್ರಜ್ಞಾನ ಮೇಳಕ್ಕೆ ಮಂಗಳವಾರ ಸಂಜೆ ವಿದ್ಯುಕ್ತವಾಗಿ ತೆರೆಬಿದ್ದತು.ಚುಂಚಾದ್ರಿ ಮತ್ತು ಆದಿಶಕ್ತಿ ಸಭಾ ಭವನದಲ್ಲಿ 80ಕ್ಕೂ ಹೆಚ್ಚು ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಿಂದ 1 ಸಾವಿರಕ್ಕೂ ಹೆಚ್ಚು ವಿಜ್ಞಾನ, ತಂತ್ರಜ್ಞಾನ ಹಾಗೂ ಆಧ್ಯಾತ್ಮಿಕ ಮಳಿಗೆಗಳು ತೆರೆದಿದ್ದು, ಹಲವು ಮೇಳ ವೀಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದವು. ಮಂಗಳವಾರವೂ ಸಹ ಸ್ಥಳೀಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೇಳವನ್ನು ವೀಕ್ಷಣೆ ಮಾಡಿದರು.
ಮಂಗಳವಾರ ಬೆಳಗ್ಗೆ ಇಸ್ರೋ ಸಂಸ್ಥೆ ಅಧ್ಯಕ್ಷ ಎಸ್.ಸೋಮನಾಥ್, ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸ್ವಾಮಿ ಪರಮಾತ್ಮಾನಂದ ಸರಸ್ವತಿ, ಶ್ರೀಮಹಂತ್ ಬಾಲಕ್‌ನಾಥ್ ಯೋಗಿ ಸೇರಿದಂತೆ ಅನೇಕ ಗಣ್ಯರು ಜ್ಞಾನ-ವಿಜ್ಞಾನ-ತಂತ್ರಜ್ಞಾನ ಮೇಳವನ್ನು ವೀಕ್ಷಣೆ ಮಾಡಿ, ಇಂತಹ ಮೇಳಗಳು ಯುವ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವ ಜೊತೆಗೆ ಯುವಕರಿಗೆ ವಿಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ವಿವಿಧ ಕಾಲೇಜುಗಳು ಮಾತ್ರವಲ್ಲದೆ ತಮಿಳುನಾಡಿನ ಕುಂಬಂನ ಬಿಜಿಎಸ್ ಕಾಲೇಜು ವಿದ್ಯಾರ್ಥಿಗಳು ಮೇಳದಲ್ಲಿ ಭಾಗವಹಿಸಿದ್ದರು.ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಶ್ರೀಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥಸ್ವಾಮೀಜಿ, ರಾಜಸ್ಥಾನದ ಕಿಶನ್‌ನಾಥ ಸ್ವಾಮೀಜಿ, ಶಿಲ್ಪ ಶಾಸ್ತ್ರಜ್ಞ ಶಂಕರ ಸ್ತಪತಿ, ಶೇಖರನಾಥ ಸ್ವಾಮೀಜಿ, ಉದ್ಯಮಿ ಸ್ಟಾರ್ ಚಂದ್ರು, ಆದಿಚುಂಚನಗಿರಿ ವಿವಿ ಉಪಕುಲಪತಿ ಡಾ. ಎಂ.ಎ.ಶೇಖರ್, ಆಸ್ಪತ್ರೆ ಪ್ರಾಂಶುಪಾಲ ಡಾ.ಎಂ.ಜಿ.ಶಿವರಾಮು, ಶಿಕ್ಷಣ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ.ಎ.ಟಿ.ಶಿವರಾಮು ಸೇರಿದಂತೆ ವಿವಿಧ ಶಾಖಾ ಮಠಗಳ ಶ್ರೀಗಳು ಸಹಸ್ರಾರು ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಭಕ್ತರು ಇದ್ದರು.