ಗರ್ಭಕಂಠದ ಕ್ಯಾನ್ಸರ್ ದೇಹಕ್ಕೆ ಮಾರಕ

| Published : Oct 06 2024, 01:17 AM IST

ಸಾರಾಂಶ

ತುಮಕೂರು: ಪ್ರಸ್ತುತ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಗರ್ಭಕಂಠದ ಕ್ಯಾನ್ಸರ್ ಕಂಡು ಬರುತ್ತಿದೆ. ಟಾಟಾ ಮೆಮೋರಿಯಲ್ ಆಸ್ಪತ್ರೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಲ್ಲಿ ಪ್ರತಿ 8 ನಿಮಿಷಕ್ಕೆ ಒಬ್ಬ ಮಹಿಳೆ ಗರ್ಭಕಂಠದ ಕ್ಯಾನ್ಸರ್‌ನಿಂದ ಸಾಯುತ್ತಿದ್ದಾರೆ ಎಂದು ನಗರದ ಕಸ್ತೂರ್ ಬಾ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ.ವಿಶಾಖ ತಿಳಿಸಿದರು.

ಸಮೀಪ ಕೈದಾಳದ ಶ್ರೀ ಅಮರಶಿಲ್ಪಿ ಜಕಣಾಚಾರಿ ಸ್ಮಾರಕ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿಸಿ ಟ್ರಸ್ಟ್ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಹಾಗೂ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇದು ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ, ಧೂಮಪಾನ, ಮದ್ಯಪಾನ ಮಾಡುವವರಿಗೆ ಬೇಗ ಬರುತ್ತದೆ. ಮಹಿಳೆಯರು ಪ್ರತಿ 6 ತಿಂಗಳಿಗೊಮ್ಮೆ ವೈದ್ಯರನ್ನು ಸಂಪರ್ಕಿಸಿ ಅವರ ಸಲಹೆ ಪಡಯಬೇಕು ಎಂದರು.

ಮಹಿಳೆಯರು ಸರಿಯಾದ ಸಮಯಕ್ಕೆ ಆಹಾರ ತೆಗೆದುಕೊಳ್ಳಬೇಕು, ವಿಟಮಿನ್, ಮಿನರಲ್ಸ್, ಕ್ಯಾಲ್ಸಿಯಂಯುಕ್ತ ಆಹಾರ ಸ್ವೀಕರಿಸಬೇಕು. ನಿಯಮಿತ ನಿದ್ದೆ, ವ್ಯಾಯಾಮ, ಪೌಷ್ಟಕಾಂಶಯುಕ್ತ ಆಹಾರದಿಂದ ಉತ್ತಮ ಆರೋಗ್ಯ ಹೊಂದಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ರೋಟರಿ ಕ್ಲಬ್ ಅಧ್ಯಕ್ಷರಾದ ರಾಜೇಶ್ವರಿ ರುದ್ರಪ್ಪ, ಗರ್ಭಕಂಠ ಕ್ಯಾನ್ಸರ್ ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಮ್ಮ ರೋಟರಿ ಸಂಸ್ಥೆಯಿಂದ 9 ರಿಂದ 14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ತಾಲೂಕು ಯೋಜನಾಧಿಕಾರಿ ಪ್ರಭಾಕರ್ ರಾಮ್ ನಾಯಕ್, ಜ್ಞಾನವಿಕಾಸ ಕೇಂದ್ರದ ತಾಲೂಕು ಸಮನ್ವಯಾಧಿಕಾರಿ ನಾಗಮಣಿ.ಎನ್.ವಿ, ರೋಟರಿ ಕಾರ್ಯದರ್ಶಿ ನಾಗಮಣಿಪ್ರಭಾಕರ್, ಗ್ರಾಮ ಪಂಚಾಯತ್ ಸದಸ್ಯ ಉಮಾಶಂಕರ್, ಸಂಸ್ಥೆಯ ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಸೇರಿ ಇತರರು ಇದ್ದರು.