ಸಾರಾಂಶ
ಚಾಮರಾಜನಗರ ವಿವಿಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಕುಲಪತಿ ಪ್ರೊ.ಎಮ್.ಆರ್.ಗಂಗಾಧರ್ ಚಾಲನೆ ನೀಡಿದರು.
ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು, ಓದಿನ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವವನ್ನು ರೂಢಿಸಿಕೊಳ್ಳಬೇಕು ಎಂದು ಚಾಮರಾಜನಗರ ವಿವಿ ಕುಲಪತಿ ಪ್ರೊ.ಗಂಗಾಧರ್ ಹೇಳಿದರು.
ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ 2024 25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳೆದ ಒಂದು ವಾರದಿಂದ ಸುವರ್ಣ ಸಂಭ್ರಮ ಅಂಗವಾಗಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಜೊತೆಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ತಮ್ಮ ಬದುಕನ್ನು ಕಟ್ಟಿಕೊಳ್ಳಬಹುದಾಗಿದೆ ಎಂದರು.ಕುಲಸಚಿವ ಲೋಕನಾಥ್ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಆದರೆ ಭಾಗವಹಿಸುವಿಕೆ ಮತ್ತು ಸ್ಪರ್ಧೆಯ ಮನೋಭಾವ ಮುಖ್ಯವಾಗುತ್ತದೆ. ಸದೃಢ ದೇಹದಲ್ಲಿ ಸದೃಢ ಮನಸ್ಸು ರೂಪಿಸಿಕೊಳ್ಳಬೇಕಾದರೆ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆಗಳು ಸಹಕಾರಿಯಾಗಲಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪಠ್ಯೇತರ ಚಟುವಟಿಕೆಗಳನ್ನು ತೊಡಗಿಸಿಕೊಳ್ಳಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಚಾಮರಾಜನಗರ ವಿವಿ ಕ್ರೀಡಾ ಸಮಿತಿಯ ಸದಸ್ಯರಾದ ಜಿ ಬಂಗಾರು, ಉಪನ್ಯಾಸಕರಾದ ಮಹೇಶ್, ಎನ್ಎಸ್ಎಸ್ ಅಧಿಕಾರಿ ಮಹೇಶ್, ಮಹದೇವ ಮೂರ್ತಿ, ಶಿವರಾಜು, ಬಸವಣ್ಣ ಮೂಕಹಳ್ಳಿ, ನಿಂಗರಾಜು, ಚೇತನ್, ಸಚಿನ್, ಚಾಮರಾಜು, ಜಗದೀಶ್ ಮಹೇಶ್ ಬಾಬು, ಭವ್ಯ, ಸವಿತಾ ಶಶಿಕಲಾ, ನಂದಿನಿ ಗ್ರಂಥಪಾಲಕ ರಾಘವೇಂದ್ರ, ಬೋಧಕೇತರ ವರ್ಗದ ಕುಮಾರ್ ಚಿಕ್ಕಹೊಳೆ, ಪ್ರಮೋದ್ ಮಹದೇವಸ್ವಾಮಿ, ರಾಜೇಗೌಡ, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.