ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ

| Published : Mar 13 2024, 02:10 AM IST

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ
Share this Article
  • FB
  • TW
  • Linkdin
  • Email

ಸಾರಾಂಶ

ಶಿವಾನಂದ ರಾವ್ ಅವರ ನಿಧನದ ಹಿನ್ನೆಲೆಯಲ್ಲಿ ಗೌರವಾರ್ಥ ಮಂಗಳವಾರ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ರಜೆ ಸಾರಲಾಗಿತ್ತು.

ಕನ್ನಡಪ್ರಭ ವಾರ್ತೆ ಪುತ್ತೂರು

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ (೯೩) ವಯೋಸಹಜ ಅನಾರೋಗ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಸಾಮಾಜಿಕ ಹಾಗೂ ರಾಜಕೀಯವಾಗಿ ಸಕ್ರಿಯರಾಗಿದ್ದರು. ವಿಶ್ವ ಹಿಂದೂ ಪರಿಷತ್‌ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಅಯೋಧ್ಯೆ ರಾಮ ಮಂದಿರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಅವರು ೧೯೮೯ರ ಹೊತ್ತಿನಲ್ಲಿ ಶ್ರೀ ರಾಮ ಪೂಜನ ಸಮಿತಿ ಪುತ್ತೂರು ಪ್ರಖಂಡದ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ರಾಮಜನ್ಮಭೂಮಿ ಹೋರಾಟದಲ್ಲಿ ೧೯೮೯ ಹಾಗೂ ೧೯೯೨ರಲ್ಲಿ ಎರಡು ಬಾರಿಯೂ ಕರಸೇವಕರಾಗಿ ಅಯೋಧ್ಯೆಗೆ ತೆರಳಿದ್ದರು. ೧೪ ದಿನಗಳ ಕಾಲ ಸೆರೆವಾಸವನ್ನು ಅನುಭವಿಸಿದ್ದರು. ಪುತ್ತೂರಿನಲ್ಲಿ ಅಂಬಿಕಾ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಕಾರಣಕರ್ತರಾಗಿದ್ದಾರೆ.

ಮೃತರು ಪುತ್ರ ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಶಿವಾನಂದ ರಾವ್ ಅವರ ನಿಧನದ ಹಿನ್ನೆಲೆಯಲ್ಲಿ ಗೌರವಾರ್ಥ ಮಂಗಳವಾರ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ರಜೆ ಸಾರಲಾಗಿತ್ತು.