ಸಾರಾಂಶ
ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆಯಲ್ಲಿ ಪ್ರಶಾಂತಶೆಟ್ಟಿ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರಶಾಸಕರಾಗಿ 2 ನೇ ಬಾರಿ ಗೆದ್ದ ಟಿ.ಡಿ.ರಾಜೇಗೌಡರಿಗೆ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದರಿಂದ ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತಶೆಟ್ಟಿ ತಿಳಿಸಿದರು.
ಶುಕ್ರವಾರ ರಾತ್ರಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಸಕ ಟಿ.ಡಿ.ರಾಜೇಗೌಡರಿಂದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದರ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಟಿ.ಡಿ.ರಾಜೇಗೌಡರು 2 ಬಾರಿ ಶಾಸಕರಾಗಿ ಗೆದ್ದಿರುವುದರಿಂದ ಅವರನ್ನು ಮಂತ್ರಿಯನ್ನಾಗಿ ಮಾಡಬೇಕು ಎಂದು ಈ ಹಿಂದೆಯೇ ಒತ್ತಾಯ ಮಾಡಲಾಗಿತ್ತು. ಆದರೆ, ತಡವಾಗಿಯಾದರೂ ಅವರಿಗೆ ನವೀಕರಿಸಬಹುದಾದ ಇಂಧನ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ತೃಪ್ತಿ ತಂದಿದೆ.ಚುನಾವಣೆಯಲ್ಲಿ ಗೆಲ್ಲಲು ಶ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರತಿಫಲ ಸಿಕ್ಕಿದಂತಾಗಿದೆ. ಮುಂದಿನ ದಿನಗಳಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಶ್ರೀನಿವಾಸ್ ಅವರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಶಾಸಕ ಟಿ.ಡಿ.ರಾಜೇಗೌಡರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಸಹಕಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಾರ್ಜ್, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳನ್ನು ಅಭಿನಂದಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಬಿಳಾಲುಮನೆ ಉಪೇಂದ್ರ, ಪಪಂ ಸದಸ್ಯ ವಸೀಂ,ಯುವ ಕಾಂಗ್ರೆಸ್ ಘಟಕದ ತಾಲೂಕು ಅಧ್ಯಕ್ಷ ದೇವಂತರಾಜ್, ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಪಾನಿ ಶ್ರೀಧರ್, ಕೆಡಿಪಿ ಸದಸ್ಯ ಮಾಳೂರು ದಿಣ್ಣೆ ರಮೇಶ್, ಎಪಿಎಂಸಿ ನಿರ್ದೇಶಕ ಶಿವಣ್ಣ, ಬಗರ್ ಹುಕಂ ಸಮಿತಿ ಅಧ್ಯಕ್ಷ ಇ.ಸಿ.ಜೋಯಿ, ಮುಖಂಡರಾದ ರಾಬರ್ಟ್, ಕಳ್ಳಿಕೊಪ್ಪ ಮಣಿ, ಇರ್ಮಾನ್, ಶಿಬು ಮತ್ತಿತರರು ಇದ್ದರು.