ಕಾಂಗ್ರೆಸ್ ನಾಯಕರನ್ನು ತುಂಡುತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತೇವೆ ಎನ್ನುವ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ ; ಕಾಂಗ್ರೆಸ್ ನಾಯಕರನ್ನು ತುಂಡುತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತೇವೆ ಎನ್ನುವ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ್ ಜತ್ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದಾ ಸಂಸ್ಕೃತಿ, ಆಚಾರಗಳನ್ನು ಒದರುತ್ತಿರುವ ಬಿಜೆಪಿಗರ ನೈಜ ಸಂಸ್ಕೃತಿ ಇತರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಬಳಿಕ ವಿರೋಧ ವ್ಯಕ್ತವಾದರೆ ಕ್ಷಮೆ ಕೇಳುವುದು ಎಂಬಂತಾಗಿದೆ. ಎರಡು ದಿನಗಳ ಹಿಂದೆ ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಕೂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಅವಾಚ್ಯ ಪದಗಳಿಂದ ನಿಂದಿಸಿದ ಬೆನ್ನಲ್ಲೇ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡ ಅದೇ ಹಾದಿಯನ್ನು ಹಿಡಿದಿದ್ದಾರೆ. ಕಾಂಗ್ರೆಸ್ ಪಕ್ಷ ಇಂತಹ ಗೊಡ್ಡು ಬೆದರಿಕೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಹೆದರುವುದಿಲ್ಲ ಎನ್ನುವ ವಿಚಾರ ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದವರು ಹೇಳಿದ್ದಾರೆ.ಇಂತಹ ವರ್ತನೆಗಳಿಗೆ ರಾಜ್ಯದ ಜನರು ಸೊಪ್ಪು ಹಾಕುವುದಿಲ್ಲ. ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ರಾಜ್ಯದ ಜನರೇ ಸೂಕ್ತ ಉತ್ತರವನ್ನು ಮುಂದಿನ ದಿನಗಳಲ್ಲಿ ನೀಡಲಿದ್ದಾರೆ. ಕೂಡಲೇ ಅವರು ಅವರ ಹೇಳಿಕೆಗೆ ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಪ್ರಶಾಂತ್ ಜತ್ತನ್ನ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.