ಮಹಿಳೆಯರ ವ್ಯಕ್ತಿತ್ವ ವಿಕಸನಕ್ಕೆ ಸವಾಲು ಸಹಕಾರಿ: ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ

| N/A | Published : Mar 10 2025, 01:35 AM IST / Updated: Mar 10 2025, 08:01 AM IST

ಮಹಿಳೆಯರ ವ್ಯಕ್ತಿತ್ವ ವಿಕಸನಕ್ಕೆ ಸವಾಲು ಸಹಕಾರಿ: ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ
Share this Article
  • FB
  • TW
  • Linkdin
  • Email

ಸಾರಾಂಶ

ಮಹಿಳೆಯರು ಸವಾಲುಗಳನ್ನು ಎದುರಿಸುವಾಗ ಉಂಟಾಗುವ ಅಡೆತಡೆಗಳನ್ನೂ ವ್ಯಕ್ತಿತ್ವ ವಿಕಸನಕ್ಕೆ ಲಭ್ಯವಾಗುವ ಅವಕಾಶಗಳು ಎಂದು ತಿಳಿದು ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಸಲಹೆ ನೀಡಿದರು.

 ಬೆಂಗಳೂರು : ಮಹಿಳೆಯರು ಸವಾಲುಗಳನ್ನು ಎದುರಿಸುವಾಗ ಉಂಟಾಗುವ ಅಡೆತಡೆಗಳನ್ನೂ ವ್ಯಕ್ತಿತ್ವ ವಿಕಸನಕ್ಕೆ ಲಭ್ಯವಾಗುವ ಅವಕಾಶಗಳು ಎಂದು ತಿಳಿದು ಮುನ್ನಡೆಯಬೇಕು ಎಂದು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಸಲಹೆ ನೀಡಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಂಡಿಯನ್ ಅಕಾಡೆಮಿ ಗ್ರೂಪ್ ಆಫ್ ಇನ್ಸ್‌ಟಿಟ್ಯೂಷನ್‌ನ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯು ಓರ್ವ ತಾಯಿಯಾಗಿ, ಮಗಳಾಗಿ, ಅಧಿಕಾರಿಯಾಗಿ ಕರ್ತವ್ಯ ನಿಭಾಯಿಸುವಾಗ ಎದುರಾಗುವ ಸವಾಲುಗಳನ್ನು ನಿಭಾಯಿಸಬೇಕು. ಉದ್ಯೋಗದಲ್ಲಿ ತಮ್ಮ ವ್ಯಕ್ತಿತ್ವ ಮತ್ತು ನಿಲುವುಗಳನ್ನು ಪ್ರಸ್ತುತಪಡಿಸುವ ಸಂದರ್ಭಗಳು ಸಹ ವ್ಯಕ್ತಿತ್ವ ವಿಕಸನಕ್ಕೆ ಲಭ್ಯವಾಗುವ ಅವಕಾಶಗಳು ಎಂದು ತಿಳಿದು ಮುನ್ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಪ್ರಾಂಶುಪಾಲೆ ಡಾ.ಭಾರತಿ, ಹಲವು ರಂಗಗಳ ಮುಖಂಡರಾದ ಸುನೀತಾ, ಮೇಘ, ಉಮಾ ಮೆನನ್, ಸುನೀತಾ ದುಬೆ, ರೀನಾಶಾಮ್ ಸಂವಾದದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.