ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ಸರ್ಕಾರಿ ವಾಹನ ಚಾಲಕರ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ವಾರ್ತಾ ಇಲಾಖೆ ವಾಹನ ಚಾಲಕ ಚಲುವರಾಜು ಅವರನ್ನು ಆರೋಗ್ಯ ಇಲಾಖೆ ವಾಹನ ಚಾಲಕರು ಅಭಿನಂದಿಸಿದರು.ಪಟ್ಟಣದ ತಾಲೂಕಿನ ಸರ್ಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಥಾಮಸ್ ಜೈಕಾರ್ ನೇತೃತ್ವದಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ವಾಹನ ಚಾಲಕರು ನೂತನ ಜಿಲ್ಲಾಧ್ಯಕ್ಷ ಚಲುವರಾಜು ಅವರಿಗೆ ಬಾರಿ ಗಾತ್ರದ ಹಾರ ಹಾಕಿ ಶಾಲು ಹಾಕಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ತಾಲೂಕು ಅಧ್ಯಕ್ಷ ಥಾಮಸ್ ಜೈಕಾರ್ ಮಾತನಾಡಿ, ನೂತನ ಜಿಲ್ಲಾಧ್ಯಕ್ಷರು ಮಂಡ್ಯ ಜಿಲ್ಲೆಯ ಎಲ್ಲಾ ಸರ್ಕಾರಿ ವಾಹನ ಚಾಲಕರ ಹಿತ ಕಾಯುವ ಮೂಲಕ ಸಂಘದ ಅಭಿವೃದ್ಧಿಗೆ ಕಂಕಣಬದ್ಧರಾಗಿ ದುಡಿಯಬೇಕು ಎಂದರು.ಈ ವೇಳೆ ಆರೋಗ್ಯ ಇಲಾಖೆ ವಾಹನ ಚಾಲಕರಾದ ಜೋನ್, ಸುರೇಶ್, ಸತೀಶ್, ಬಿರೇಶ್, ನಾಗೇಂದ್ರ, ಪ್ರವೀಣ್, ಪಾಂಡವಪುರ ಶಿವಲಿಂಗು ಇತರರು ಇದ್ದರು.
ನಾಳೆ ಟಿ.ತಿಮ್ಮೇಗೌಡ ಪ್ರತಿಷ್ಠಾನ ಉದ್ಘಾಟನೆಕನ್ನಡಪ್ರಭ ವಾರ್ತೆ ಮಂಡ್ಯ
ಮಂಗಲ ಟಿ.ತಿಮ್ಮೇಗೌಡ ಪ್ರತಿಷ್ಠಾನದ ಉದ್ಘಾಟನೆ, ಟಿ.ತಿಮ್ಮೇಗೌಡ ಜನಮುಖಿ ಆಡಳಿತ ಪ್ರಶಸ್ತಿ, ಲಿಂಗಮ್ಮ ದೊಡ್ಡಿ ತಿಮ್ಮೇಗೌಡ ಕೃಷಿಕ ಪ್ರಶಸ್ತಿ ಹಾಗೂ ಎಂ.ಆರ್.ಶಶಿಕಲಾ ಟಿ.ತಿಮ್ಮೇಗೌಡ ವಿದ್ಯಾರ್ಥಿ ಪುರಸ್ಕಾರ ಸಮಾರಂಭ ಆ.೧೦೦ರಂದು ಮಧ್ಯಾಹ್ನ ೩.೩೦ಕ್ಕೆ ನಗರದ ರೈತ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎ.ಸಿ.ರಮೇಶ್ ತಿಳಿಸಿದರು.ಸಮಾರಂಭದ ದಿವ್ಯಸಾನ್ನಿಧ್ಯವನ್ನು ಶ್ರೀಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಪ್ರತಿಷ್ಠಾನದ ಉದ್ಘಾಟನೆ ಹಾಗೂ ಜನಮುಖಿ ಅಧಿಕಾರಿ ಪ್ರಶಸ್ತಿಯನ್ನು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್.ಲತಾ ಅವರಿಗೆ ವಿಶ್ರಾಂತ ಅಪರ ಮುಖ್ಯ ಕಾರ್ಯದರ್ಶಿ ಡಾ.ಚಿರಂಜೀವಿ ಸಿಂಗ್ ನೀಡುವರು. ಜಿಲ್ಲಾಧಿಕಾರಿ ಡಾ.ಕುಮಾರ ಅವರು ಲಿಂಗಮ್ಮ ದೊಡ್ಡಿತಿಮ್ಮೇಗೌಡ ಕೃಷಿಕ ಪ್ರಶಸ್ತಿಯನ್ನು ಎಂ.ಎನ್.ಮಹೇಶ್‌ಕುಮಾರ್ ಅವರಿಗೆ ನೀಡಿ ಗೌರವಿಸುವರು. ಎಂ.ಆರ್.ಶಶಿಕಲಾ ಟಿ.ತಿಮ್ಮೇಗೌಡ ವಿದ್ಯಾರ್ಥಿ ಪುರಸ್ಕಾರವನ್ನು ಹನಿಯಂಬಾಡಿಯ ಎಚ್.ಎಂ.ಅನುಷಾ, ಮಂಗಲ ಗ್ರಾಮದ ಪ್ರಮೋದಿನಿ ಅವರಿಗೆ ಬೆಂಗಳೂರಿನ ಕಣ್ವ ಡಯಾಗ್ನೋಸ್ಟಿಕ್ ಸೆಂಟರ್ ಮಾಲೀಕ ಡಾ.ಎಚ್.ಎಂ.ವೆಂಕಟಪ್ಪ ನೀಡಲಿದ್ದಾರೆ ಎಂದು ನುಡಿದರು.ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅಭಿನಂದನಾ ನುಡಿಗಳನ್ನಾಡುವರು. ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಮತ್ತು ಎಂ.ಆರ್.ಶಶಿಕಲಾ ಉಪಸ್ಥಿತರಿರುವರು ಎಂದು ಹೇಳಿದರು.
ಗೋಷ್ಠಿಯಲ್ಲಿ ಕೀಲಾರ ಕೃಷ್ಣೇಗೌಡ, ಕೆ.ಜಿ.ಸುರೇಶ್, ಎಂ.ಸಿ.ಲಂಕೇಶ್, ಮತ್ತಿತರರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))