ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ಚಲುವರಾಯಸ್ವಾಮಿ ಸಂತಾಪ

| Published : Apr 30 2024, 02:05 AM IST

ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ಚಲುವರಾಯಸ್ವಾಮಿ ಸಂತಾಪ
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮೆಲ್ಲರ ಹಿರಿಯರು, ಮಾರ್ಗದರ್ಶಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ ಅತ್ಯಂತ ಅಪರೂಪದ ರಾಜಕಾರಣಿ. ದಲಿತರು, ಶೋಷಿತರ ಪರ ಗಟ್ಟಿ ಧ್ವನಿಯಾಗಿದ್ದ ಶ್ರೀನಿವಾಸ್ ಪ್ರಸಾದ್‌ ಅವರು ತಮ್ಮ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ ಅನೇಕ ಸಾಧನೆ ಮಾಡಿ‌ ಮಾದರಿಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಚಾಮರಾಜನಗರ ಸಂಸದ, ಕೇಂದ್ರ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸಂತಾಪ ಸೂಚಿಸಿದ್ದಾರೆ. ನಮ್ಮೆಲ್ಲರ ಹಿರಿಯರು, ಮಾರ್ಗದರ್ಶಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ ಅತ್ಯಂತ ಅಪರೂಪದ ರಾಜಕಾರಣಿ. ದಲಿತರು, ಶೋಷಿತರ ಪರ ಗಟ್ಟಿ ಧ್ವನಿಯಾಗಿದ್ದ ಶ್ರೀನಿವಾಸ್ ಪ್ರಸಾದ್‌ ಅವರು ತಮ್ಮ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ ಅನೇಕ ಸಾಧನೆ ಮಾಡಿ‌ ಮಾದರಿಯಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಸಮರ್ಥವಾಗಿ ಜವಾಬ್ದಾರಿ ನಿಭಾಯಿಸಿದ್ದಾರೆ. ಅವರ ನಿಧನದಿಂದ ರಾಜ್ಯ ರಾಜಕೀಯ ‌ಕ್ಷೇತ್ರಕ್ಕೆ‌ ದೊಡ್ಡ ನಷ್ಟ ಉಂಟಾಗಿದೆ. ದೇವರು ಅವರ ಆತ್ಮಕ್ಕೆ ಚಿರ ಶಾಂತಿ ನೀಡಲಿ, ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ‌ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ವಿ.ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಡಾ.ಈ.ಸಿ.ನಿಂಗರಾಜ್ ಗೌಡ ಸಂತಾಪ

ಕನ್ನಡಪ್ರಭ ವಾರ್ತೆ ಮಂಡ್ಯಬಿಜೆಪಿ ಹಿರಿಯ ಮುಖಂಡ, ಚಾಮರಾಜನಗರ ಕ್ಷೇತ್ರದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಮತ್ತು ಬಿಜೆಪಿ ಮುಖಂಡ ಡಾ.ಈ.ಸಿ.ನಿಂಗರಾಜ್ ಗೌಡ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೇಂದ್ರದ ಮಾಜಿ ಆಹಾರ ಸಚಿವರಾದ ಅವರು 6 ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ, ಮಾಜಿ ಕಂದಾಯ ಸಚಿವರಾಗಿ ಜನಪ್ರಿಯತೆ ಪಡೆದಿದ್ದರು ಎಂದು ತಿಳಿಸಿದ್ದಾರೆ. ಅವರ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.