ಕನ್ನಡಪ್ರಭ ವಾರ್ತೆ ನಾಗಮಂಗಲ

ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಸೌಮ್ಯಕೇಶವಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಾರ್ವಜನಿಕ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅವರ 65ನೇ ವರ್ಷದ ಹುಟ್ಟುಹಬ್ಬವನ್ನು ಸೋಮವಾರ ಸಡಗರದಿಂದ ಆಚರಿಸಲಾಯಿತು.ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶ್ರೀಸೌಮ್ಯಕೇಶವಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಪ್ರಧಾನ ಅರ್ಚಕ ತಿರುನಾರಾಯಣ ಅಯ್ಯಂಗಾರ್ ಅವರಿಂದ ವಿಶೇಷ ಪೂಜೆ ನೆರವೇರಿಸಿ, ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಉತ್ತಮ ಆರೋಗ್ಯ, ಆಯಸ್ಸು ಕರುಣಿಸುವ ಜೊತೆಗೆ, ರಾಜಕೀಯವಾಗಿ ಸಾರ್ವಜನಿಕ ಸೇವೆ ಮಾಡಲು ಮತ್ತಷ್ಟು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದರು.

ಬಳಿಕ ಪಟ್ಟಣದ ಟಿ.ಮರಿಯಪ್ಪ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿದ ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ತಾಲೂಕು ಆರೋಗ್ಯಾಧಿಕಾರಿ ಡಾ.ನಾರಾಯಣ ಅವರ ಸಮ್ಮುಖದಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಮುಖಂಡರಾದ ಕಲ್ಲುಕೊಂಬರಿ ಗೋವಿಂದ, ಚಿಕ್ಕಮ್ಮ, ಸಂಪತ್‌ಕುಮಾರ್, ವಿಜಯಕುಮಾರ್ ಸೇರಿದಂತೆ ಹಲವರು ಇದ್ದರು.ಚಲುವರಾಯಸ್ವಾಮಿ ಹುಟ್ಟುಹಬ್ಬ: ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ

ಪಾಂಡವಪುರ:ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಎ.ಸಿ.ಹಲಗೇಗೌಡರ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು.


ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಮುಖಂಡ ಎ.ಸಿ.ಹಲಗೇಗೌಡ ಮಾತನಾಡಿ, ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ನಮ್ಮನಾಯಕರಾದ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬವನ್ನು ಸಾಂಕೇತಿಕವಾಗಿ ಆಚರಿಸಿದ್ದೇವೆ ಎಂದರು.ಚಲುವರಾಯಸ್ವಾಮಿ ಅವರು ಉತ್ತಮ ಆಡಳಿತಗಾರರು, ಶಾಸಕ, ಸಂಸದ ಹಾಗೂ ಸಚಿವರಾಗಿ ಜಿಲ್ಲೆ ಹಾಗೂ ರಾಜ್ಯಕ್ಕೆ ತನ್ನದೆಯಾದ ಕೊಡುಗೆ ನೀಡಿದ್ದಾರೆ. ಹಾಗಾಗಿ ಅವರಿಗೆ ಮತ್ತಷ್ಟು ನಾಡಿನ ಸೇವೆ ಮಾಡಲು ತಾಯಿ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ ಎಂದು ಹಾರೈಸಿದರು.

ಮನ್ಮುಲ್ ಮಾಜಿ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ಮಾತನಾಡಿ, ಮಾಜಿ ಸಚಿವ ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬ ಸಾಂಕೇತಿಕವಾಗಿ ಆಚರಿಸಿದ್ದೇವೆ. ಅವರಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಜನಸೇವೆ ಮಾಡಲು ಒಳ್ಳೆಯ ಅಧಿಕಾರಿ ದೊರೆಯಲಿ ಎಂದು ಹಾರೈಸಿದರು. ಈ ವೇಳೆ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸಿ.ಎ.ಅರವಿಂದ್ ಮುಖಂಡರಾದ ಎಚ್.ಕೆ.ನವೀನ, ಕೃಷ್ಣ, ಕೀರ್ತಿ, ಅಮೃತಿ ಈರಣ್ಣ, ಪಾರ್ಥ ಸೇರಿದಂತೆ ಹಲವರು ಇದ್ದರು.