ಚಾಮರಾಜನಗರ ದಸರಾ: ಆಕರ್ಷಕ ದೀಪಾಲಂಕಾರಕ್ಕೆ ಚಾಲನೆ

| Published : Oct 05 2024, 01:35 AM IST

ಚಾಮರಾಜನಗರ ದಸರಾ: ಆಕರ್ಷಕ ದೀಪಾಲಂಕಾರಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಅಕರ್ಷಕ ವಿದ್ಯುತ್ ದೀಪಾಲಂಕಾರಕ್ಕೆ ಗುರುವಾರ ಸಂಜೆಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಚೆಲುವ ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಅಕರ್ಷಕ ವಿದ್ಯುತ್ ದೀಪಾಲಂಕಾರಕ್ಕೆ ಗುರುವಾರ ಸಂಜೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.ಚಾಮರಾಜೇಶ್ವರ ದೇವಾಲಯದ ಉದ್ಯಾನವನದ ಬಳಿ ಶಾಸಕ ಸಿ. ಪುಟ್ಟರಂಗಶೆಟ್ಟಿ ದಸರಾ ದೀಪಾಲಂಕಾರಕ್ಕೆ ವಿದ್ಯುತ್ ಗುಂಡಿ ಒತ್ತುವ ಮೂಲಕ ಚಾಲನೆ ನೀಡಿದರು. ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಪಂ ಸಿಇಒ ಮೋನಾ ರೋತ್, ಎಸ್ಪಿ ಡಾ.ಕವಿತ, ಎಡಿಸಿ ಗೀತಾ ಹುಡೇದ ಉಪಸ್ಥಿತರಿದ್ದರು.

ದಸರಾ ಮಹೋತ್ಸವದ ಅಂಗವಾಗಿ ಚಾಮರಾಜನಗರ ಪಟ್ಟಣ ವ್ಯಾಪ್ತಿಒಯಲ್ಲಿ ೮ ಕಿ.ಮೀ.ಗೂ ಹೆಚ್ಚು ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ನಗರದ ಪ್ರಮುಖ ೧೦ ವೃತ್ತಗಳಲ್ಲಿ ವಿಶೇಷವಾಗಿ ದೀಪಾಲಂಕಾರ ಗಮನ ಸೆಳೆಯುತ್ತಿದೆ. ಬುದ್ಧ, ಬಸವ, ಅಂಬೇಡ್ಕರ್ ಪ್ರತಿಕೃತಿಗಳಿಗೆ ದೀಪಾಲಂಕಾರ ಮಾಡಲಾಗಿದೆ. ದೇವರ ಪ್ರತಿಕೃತಿಗಳಿಗೂ ಅಕರ್ಷಕವಾಗಿ ಬಣ್ಣಬಣ್ಣದ ದೀಪಗಳನ್ನು ಅಳವಡಿಸಲಾಗಿದೆ. ರಾಜ್ಯಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಬಣ್ಣದ ದೀಪಗಳಿಂದ ಬಿಂಬಿಸಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಬಣ್ಣದ ಬೆಳಕಿನ ಸ್ವಾಗತ ಕಮಾನುಗಳನ್ನು ಹಾಕಲಾಗಿದೆ. ಜಿಲ್ಲಾಡಳಿತ ಭವನ, ಜಿಲ್ಲಾ ಪೊಲೀಸ್ ಕಚೇರಿ ಸೇರಿದಂತೆ ವಿವಿಧೆಡೆ ವಿಶೇಷವಾಗಿ ದೀಪಾಲಂಕಾರ ಮಾಡಲಾಗಿದೆ. ಜಗಮಗಿಸುವ ದೀಪಗಳಿಂದ ನಗರವನ್ನು ಸಿಂಗಾರಗೊಳಿಸಲಾಗಿದ್ದು, ಚಾಮರಾಜನಗರ ಪಟ್ಟಣ ಕಂಗೊಳಿಸುತ್ತಿದೆ.