ಗರ್ಭಿಣಿ, ಬಾಣಂತಿಯರು ಸಮತೋಲಿತ ಆಹಾರ ಸೇವಿಸಿಗರ್ಭಿಣಿ, ಬಾಣಂತಿಯರ ಆಹಾರದಲ್ಲಿ ಹೆಚ್ಚು ಪೌಷ್ಠಿಕಾಂಶ, ಸತ್ವಯುತ ಆಹಾರವನ್ನು ಸೇವನೆ ಮಾಡಬೇಕು, ಯಾವುದೇ ಕಾರಣಕ್ಕೂ ಆಹಾರದಲ್ಲಿ ನಿರ್ಲಕ್ಷ್ಯ ವಹಿಸಬಾರದು. ಜೊತೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಹಾಗೂ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ. ತನುಜಾ ಕರೆ ನೀಡಿದರು.