ಪರಿಷ್ಕೃತ ವೇತನದ ಮೇಲೆ ಆರ್ಥಿಕ ಸೌಲಭ್ಯ ನೀಡಿನಿವೃತ್ತರಾದ ನೌಕರರಿಗೆ ೭ನೇ ವೇತನ ಆಯೋಗದ ಅನುಜಾನದಲ್ಲಿ ನಿವೃತ್ತಿ ಉಪಲಬ್ಧಗಳನ್ನು ಪಾವತಿಸುವ ಸಂದರ್ಭದಲ್ಲಿ ಆರ್ಥಿಕ ನಷ್ಟವಾಗಿದ್ದು ಇದನ್ನು ಸರಿಪಡಿಸವಂತೆ ಆಗ್ರಹಿಸಿ ನಗರದಲ್ಲಿ ನಿವೃತ್ತ ನೌಕರರ ವೇದಿಕೆ ಜಿಲ್ಲಾ ಸಮಿತಿಯಿಂದ ಮೌನ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.