ಬಾಹ್ಯಾಕಾಶ ಕ್ಷೇತ್ರದಲ್ಲಿನ ಅವಕಾಶ ಬಳಸಿಕೊಳ್ಳಿಚಂದ್ರನ ದಕ್ಷಿಣ ಧ್ರುವದ ಮೇಲೆ ಚಂದ್ರಯಾನ -೩ ಯಶಸ್ವಿಯಾಗಿ ಇಳಿದ ದಿನದ ನೆನಪಿಗಾಗಿ ಪ್ರತಿ ವರ್ಷ ಆಗಸ್ಟ್ ೨೩ ರಂದು ದೇಶಾದ್ಯಂತ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ಆಸಕ್ತಿ ಮೂಡಿಸುವುದಾಗಿದೆ ಎಂದು ಯು. ಆರ್. ರಾವ್ ಉಪಗ್ರಹ ಕೇಂದ್ರ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಿರಿಯ ವಿಜ್ಞಾನಿ ಡಾ.ವೆಂಕಟೇಶ್ ಹೇಳಿದರು.