ಸಾಮೂಹಿಕ ವಿವಾಹದಲ್ಲಿ ದಾಂಪತ್ಯಕ್ಕೆ ಕಾಲಿಟ್ಟ 93 ಜೋಡಿ ಶ್ರೀ ಮಲೆ ಮಹದೇಶ್ವರ ಬೆಟ್ಟದ ದೇವಾಲಯದ ಸಮೀಪದ ರಂಗ ಮಂದಿರದಲ್ಲಿ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸೋಮವಾರ ಆಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ 93 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.ಸೋಮವಾರ ಬೆಳಗ್ಗೆ 9.20 ರಿಂದ 10.10 ರೊಳಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಸುತ್ತೂರು ಶ್ರೀ ಶಿವರಾತ್ರಿದೇಶಿ ಕೇಂದ್ರ ಸ್ವಾಮೀಜಿ ಹಾಗೂ ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. ವಧುವಿಗೆ ಸೀರೆ, ಮಾಂಗಲ್ಯ, ಬಳೆ, ರವಿಕೆ,ಕಾಲುಂಗುರ ಹಾಗೂ ವರನಿಗೆ ಪಂಚೆ, ಶರ್ಟ್, ಟವೆಲ್ ಪ್ರಾಧಿಕಾರದಿಂದ ನೀಡಲಾಯಿತು.