ಗುಂಡ್ಲುಪೇಟೇಲಿ ಮತ್ತೆ ಬೀಡಾಡಿ ದನಗಳ ಹಾವಳಿ!ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀಡಾಡಿ ದನ, ಕರುಗಳ ಹಾವಳಿ ಹೆಚ್ಚಿದ್ದು ವಾಹನಗಳ ಸವಾರರು ಹಾಗೂ ದಾರಿ ಹೋಕರಿಗೆ ಕಂಟಕವಾಗಿ ಪರಿಣಮಿಸಿವೆ. ಪುರಸಭೆಯಲ್ಲಿ ೨೩ ಸದಸ್ಯರು, ಪುರಸಭೆ ಆಡಳಿತಾಧಿಕಾರಿ, ಪುರಸಭೆ ಮುಖ್ಯಾಧಿಕಾರಿ ಇದ್ದರೂ ಹೆದ್ದಾರಿಯಲ್ಲಿ ಬೀಡಾಡಿ ದನಗಳ ಹಾವಳಿ ತಪ್ಪಿಸಲು ಆಗಿಲ್ಲ.