ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲರ ಸಹಕಾರ ಮುಖ್ಯ: ನ್ಯಾಯಾಧೀಶ ಈಶ್ವರ್ಮಕ್ಕಳ ಹಕ್ಕುಗಳ ರಕ್ಷಣೆ ಮಾಡಿ ಸಮಾಜದ ಉತ್ತಮ ಪ್ರಜೆಯನ್ನಾಗಿ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ತಿಳಿಸಿದರು. ಚಾಮರಾಜನಗರದಲ್ಲಿ ಕಾನೂನುಗಳ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.