ಚಾಮರಾಜನಗರದ ಲೋಕ್ ಅದಾಲತ್‌ನಲ್ಲಿ 61,962 ಪ್ರಕರಣಗಳು ಇತ್ಯರ್ಥಸರ್ವರಿಗೂ ನ್ಯಾಯ ಎಂಬ ಪರಿಕಲ್ಪನೆಯಡಿಯಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ತ್ವರಿತವಾಗಿ ಪ್ರಕರಣಗಳು ಇತ್ಯರ್ಥವಾಗಬೇಕೆಂಬ ಉದ್ದೇಶದಿಂದ ಕಳೆದ ಡಿ.14ರಂದು ಚಾಮರಾಜನಗರ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ್ ಅದಾಲತ್‌ನಲ್ಲಿ ಒಟ್ಟು 61,962 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.