ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚನೆಅಂಗನವಾಡಿ ಮಕ್ಕಳಿಗೆ ಹಾಲು, ಮೊಟ್ಟೆ, ಸಿರಿಧಾನ್ಯಯುಕ್ತ ಚಿಕ್ಕಿ, ಕಡ್ಲೇಕಾಳು (ನ್ಯೂಟ್ರೀಷಿಯನ್ ಫುಡ್) ಆಹಾರಗಳನ್ನು ಸಮರ್ಪಕವಾಗಿ ಪೂರೈಸಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗರದಲ್ಲಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.