ಪ್ರತಿಯೊಬ್ಬರ ಜೀವನ, ಬದುಕು ಇತರರಿಗೆ ಸ್ಫೂರ್ತಿ ಆಗಲಿ: ಪ್ರಾಂಶುಪಾಲೆ ಎಂ.ಆರ್.ಸುಮತಿಪ್ರತಿಯೊಬ್ಬರ ಜೀವನ, ಬದುಕು ಇತರರಿಗೆ ಸ್ಫೂರ್ತಿದಾಯಕವಾಗಿರಬೇಕು. ಸದೃಢ ಮಾನಸಿಕ ಹಾಗೂ ದೈಹಿಕ ಚಟುವಟಿಕೆಗಳು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಪ್ರೇರೇಪಿಸಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಎಂ.ಆರ್.ಸುಮತಿ ಅವರು ತಿಳಿಸಿದರು. ಚಾಮರಾಜನಗರದಲ್ಲಿ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಸಮಿತಿಗಳ ಸಮಾರಂಭ ಉದ್ಘಾಟಿಸಿ ಮಾತನಾಡಿದರು.