ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಸಹಕಾರ ಭವನ ನಿರ್ಮಾಣಕ್ಕೆ ಒತ್ತು: ನಂಜುಂಡಪ್ರಸಾದ್ಒಕ್ಕೂಟಕ್ಕೆ ನೀಡಿರುವ ನಿವೇಶನ ಸಹಕಾರ ಇಲಾಖೆಯ ಹೆಸರಿನಲ್ಲಿದ್ದು, ಈ ಜಾಗವನ್ನು ವರ್ಗಾಯಿಸಿಕೊಂಡು ಪ್ರಸಕ್ತ ವರ್ಷದಿಂದಲೇ ಭವನ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದು ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಹಾಗೂ ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್ ತಿಳಿಸಿದರು. ಚಾಮರಾಜನಗರದಲ್ಲಿ ಒಕ್ಕೂಟದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.