ಕಾಡಂಚಿನ ಗ್ರಾಮಸ್ಥರನ್ನು ಒಕ್ಕಲೆಬ್ಬಿಸುವ ಹುನ್ನಾರ: ಬಡಗಲಪುರ ನಾಗೇಂದ್ರಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲೆಬ್ಬಿಸುವ ಹುನ್ನಾರ ಮಾಡುತ್ತಿದೆ. ರೈತ ಸಂಘ ಇದಕ್ಕೆ ತೀವ್ರವಾಗಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ಹನೂರಿನಲ್ಲಿ ಆಲಂಬಾಡಿ, ಪುದುಕಾಡು, ಆತೂರು ಗ್ರಾಮಗಳಲ್ಲಿ ನೂತನ ಗ್ರಾಮ ಘಟಕದ ನಾಮಪಾಲಕ ಉದ್ಘಾಟನೆ ಮಾಡಿ ಮಾತನಾಡಿದರು.