ಹರೆಯದವರು ದುಶ್ಚಟಗಳಿಂದ ದೂರವಿರಬೇಕು: ಹಿರಿಯ ನ್ಯಾಯಾಧೀಶ ಈಶ್ವರ್ಹರೆಯದ ವಯಸ್ಸಿನಲ್ಲಿ ಆಸೆಗಳನ್ನು ನಿಯಂತ್ರಿಸಿಕೊಂಡು ದುಶ್ಚಟಗಳಿಂದ ದೂರವಿದ್ದರೆ ಅಪರಾಧ ಕೃತ್ಯಗಳನ್ನು ನಿಯಂತ್ರಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ನ್ಯಾಯಾಧೀಶ ಈಶ್ವರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಯಳಂದೂರಿನಲ್ಲಿ ಮಕ್ಕಳಿಗೆ ಸಂಬಂಧಿತ ಕಾನೂನುಗಳು, ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಶಾಲಾ ಕಾಲೇಜು ಮಕ್ಕಳಿಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.