ಪೌರಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಕಾರ್ಯಕ್ರಮ: ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ನಿರ್ದೇಶನದ ಮೇರೆಗೆ ನಗರಸಭೆ ವ್ಯಾಪ್ತಿಯ ಪೌರಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಿ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಕುಂದುಕೊರತೆ ಹಾಗೂ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಆಯುಕ್ತ ಎಸ್.ವಿ.ರಾಮದಾಸ್ ಹೇಳಿದರು. ಚಾಮರಾಜನಗರದಲ್ಲಿ ಪೌರಕಾರ್ಮಿಕರ ಕುಂದುಕೊರತೆ, ಸಂವಾದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರ ಸಮಸ್ಯೆ, ಅಹವಾಲುಗಳನ್ನು ಆಲಿಸಿ ಮಾತನಾಡಿದರು.