ಮೈಸೂರಿನಲ್ಲಿ 9ರಂದು ಕಾಂಗ್ರೆಸ್ ಬೃಹತ್ ಜನಾಂದೋಲನಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೇಶನ ಪಡೆದಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಜನರಿಗೆ ಸತ್ಯಾಂಶ ತಿಳಿಸಲು ಆ.೯ರಂದು ಮೈಸೂರಿನಲ್ಲಿ ಕಾಂಗ್ರೆಸ್ ಬೃಹತ್ ಜನಾಂದೋಲನ ಸಮಾವೇಶ ನಡೆಯಲಿದ್ದು, ಅಂದು ಜಿಲ್ಲೆಯ ಪಕ್ಷದ ಕಾರ್ಯಕರ್ತರು, ಮುಖಂಡರು, ಚುನಾಯಿತ ಜನಪ್ರತಿನಿಧಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಮನವಿ ಮಾಡಿದರು.