ಪ್ರವಾಹ ಪೀಡಿತ ಗ್ರಾಮಗಳಿಗೆ ಉಸ್ತುವಾರಿ ಸಚಿವರ ಭೇಟಿಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಕಾಲೇಜು ಬಳಿಯಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು, ಶಾಸಕ ಎ.ಆರ್. ಕೃಷ್ಣಮೂರ್ತಿ, ಎಂ.ಆರ್. ಮಂಜುನಾಥ್ ಅವರೊಂದಿಗೆ ಭೇಟಿ ಕೊಟ್ಟು ವೀಕ್ಷಿಸಿದರು.