ವ್ಯಕ್ತಿತ್ವದ ವಿಕಸನಕ್ಕೆ ಕ್ರೀಡೆ ಸಹಕಾರಿ: ಎಡಿಸಿ ಗೀತಾ ಹುಡೇದವ್ಯಕ್ತಿತ್ವ ವಿಕಸನ, ನಾಯಕತ್ವ ಗುಣ ಬೆಳೆಸಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಪತ್ರಕರ್ತರು ಒತ್ತಡದ ಜೀವನದಿಂದ ಮುಕ್ತರಾಗಲು ನಿತ್ಯ ಕೆಲ ಕಾಲ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಲಹೆ ನೀಡಿದರು. ಚಾಮರಾಜನಗರದಲ್ಲಿ ಪತ್ರಕರ್ತರು ಹಾಗೂ ಕುಟುಂಬದವರಿಗೆ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮಾತನಾಡಿದರು.