ಹೆಣ್ಣುಮಕ್ಕಳು ಸುಶಿಕ್ಷಿತ, ಸಂಘಟಿತರಾಗಬೇಕುಉತ್ತಮ ಶಿಕ್ಷಣ ಪಡೆಯುವ ಮೂಲಕ ಯಾವುದೇ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸಲು ಹೆಣ್ಣುಮಕ್ಕಳು ಸುಶಿಕ್ಷಿತರಾಗಿ ಸಂಘಟಿತರಾಗುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು. ಚಾಮರಾಜನಗರದಲ್ಲಿ ‘ಮಹಿಳೆಯರ ಅಭಿವೃದ್ಧಿ ಹಾಗೂ ಸ್ವಾವಲಂಬನೆ’ ಕುರಿತು ವಿದ್ಯಾರ್ಥಿನಿಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.