ಆರೋಗ್ಯಪೂರ್ಣ ಜೀವನಕ್ಕೆ ಯೋಗ ಮದ್ದು: ಎಸ್ಪಿ ಪದ್ಮಿನಿ ದೈಹಿಕ, ಮಾನಸಿಕ ಸುಸ್ಥಿತಿ ಹಾಗೂ ಆರೋಗ್ಯಪೂರ್ಣ ಜೀವನಕ್ಕಾಗಿ ಯೋಗ ಸಹಕಾರಿಯಾಗಿದ್ದು, ಪ್ರತಿಯೊಬ್ಬರು ಯೋಗವನ್ನು ಅಳವಡಿಸಿಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಿಳಿಸಿದರು. ಚಾಮರಾಜನಗರದಲ್ಲಿ ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಘೋಷವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿದ್ದ ೧೦ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.