ಎನ್‌ಡಿಎ ಅಭ್ಯರ್ಥಿ ಕೆ.ವಿವೇಕಾನಂದ ಮತಯಾಚನೆದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿರುವ ನಾನು ನಿಮ್ಮೆಲ್ಲರ ಅಶೀರ್ವಾದದಿಂದ ಆಯ್ಕೆಯಾದರೆ, ಗೌರವ ಧನವನ್ನು ಪಡೆದುಕೊಳ್ಳದೇ, ಇನ್ನು ಹೆಚ್ಚಿನ ಹಣವನ್ನು ಹಾಕಿ ಶಿಕ್ಷಕರ ಕ್ಷೇಮಾಭಿವೃದ್ದಿ ನಿಧಿಯನ್ನು ಸ್ಥಾಪಿಸಿ, ಸಂಕಷ್ಟದಲ್ಲಿರುವ ನೀವು ಸೂಚಿಸಿದ ಶಿಕ್ಷಕರಿಗೆ ನೆರವು ನೀಡಲು ಬದ್ದನಾಗಿದ್ದೇನೆ ಎಂದು ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಹೇಳಿದರು.