ಹಾಸ್ಟೆಲ್, ವಸತಿ ಶಾಲೆಗಳ ಮೂಲಸೌಕರ್ಯ ಪರಿಶೀಲನೆ ನಡೆಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ಜಿಲ್ಲೆಯ ವಿದ್ಯಾರ್ಥಿನಿಲಯ, ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಒದಗಿಸಿರುವ ಮೂಲಸೌಲಭ್ಯಗಳನ್ನು ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.