ಅತಿಹೆಚ್ಚು ತಾಪಮಾನ: ಮುನ್ನೆಚ್ಚರಿಕೆ ಕ್ರಮಗಳು ಪ್ರಸ್ತುತ ಜಿಲ್ಲೆಯಲ್ಲಿ ಅತೀ ಹೆಚ್ಚು ತಾಪಮಾನ ಪರಿಣಾಮವನ್ನು ಕಡಿಮೆ ಮಾಡಲು ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದ್ದು, ಎಲ್ಲಾ ಗ್ರಾಪಂ, ರೈತ ಸಂಪರ್ಕ ಕೇಂದ್ರಗಳು, ಕೃಷಿ ಉತ್ಪನ್ನ ಮಾರುಕಟ್ಟೆಗಳು, ಜಾನುವಾರು ಸಂತೆಗಳಲ್ಲಿ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಬಿಸಿಲಿನ ಅತೀ ಹೆಚ್ಚು ತಾಪಮಾನದಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ನಿಯಮಗಳನ್ನು ಅನುಸರಿಸುವಂತೆ ಜಿಲ್ಲಾಡಳಿತ ತಿಳಿಸಿದೆ.