ಗ್ರಾಮಗಳ ಅಭಿವೃದ್ಧಿಗೆ ಸೌಲಭ್ಯ ಕಲ್ಪಿಸಲು ಕ್ರಮಅರಣ್ಯ ಪ್ರದೇಶದ ಒಳಗಿರುವ ಗ್ರಾಮಗಳ ಅಭಿವೃದ್ಧಿಗೆ ಕಾನೂನಿನಲ್ಲಿ ತೊಡಕಿರುವುದರಿಂದ ಜಿಲ್ಲಾಡಳಿತ ಸರ್ಕಾರಕ್ಕೆ ಗ್ರಾಮಗಳ ಮೂಲ ಸೌಲಭ್ಯಗಳ ಕಲ್ಪಿಸುವ ಬಗ್ಗೆ ಪತ್ರ ವ್ಯವಹಾರ ಮಾಡಿ ವಿವಿಧ ಇಲಾಖೆಯ ಅನುಮತಿ ಪಡೆಯಲು ಹಾಗೂ ಮೂಲ ಸೌಲಭ್ಯವನ್ನು ಕಲ್ಪಿಸಲು ಕ್ರಮ ಕೈಗೊಂಡಿದೆ ಎಂದು ಕೊಳ್ಳೇಗಾಲ ಉಪವಿಭಾಗ ಅಧಿಕಾರಿ ಶಿವಮೂರ್ತಿ ಅವರು ತಿಳಿಸಿದರು.