ಸಂತೇಮರಳ್ಳಿ ಮೋಳೆ ಗ್ರಾಮದಲ್ಲಿ ಮತದಾನ ಬಹಿಷ್ಕರಕೆಂಪನಪುರ ಗ್ರಾಪಂ ವ್ಯಾಪ್ತಿಗೆ ಒಳಪಡುವ ಸಂತೆಮರಹಳ್ಳಿ ಮೋಳೆ ಗ್ರಾಮದಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನಂತಹ ಮೂಲ ಸೌಕರ್ಯಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಬೇಸತ್ತು ಹೋಗಿದ್ದು, ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದ ಮುಖ್ಯರಸ್ತೆ ಬಳಿ ಚುನಾವಣಾ ಬಹಿಷ್ಕಾರದ ಫ್ಲೆಕ್ಸ್ ಅಳವಡಿಸಿದ ಗ್ರಾಮಸ್ಥರು ಕೆಲಕಾಲ ಧರಣಿ ನಡೆಸಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.