ಕೇಂದ್ರದಿಂದ ರಾಜ್ಯಕ್ಕೆ ನಿರಂತರ ಅನ್ಯಾಯಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಈ ಹಿಂದೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಯಿ ಕಾಲದಲ್ಲೂ ರಾಜ್ಯಕ್ಕೆ ಅನ್ಯಾಯ ಆಗಿದೆ. ಈ ಬಗ್ಗೆ ದ್ವನಿ ಎತ್ತುವ ತಾಕತ್ತು, ಗಂಡಸು ಬಿಜೆಪಿಯಲ್ಲಿ ಇಲ್ಲ ಎಂದು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿ ಎಂ.ಕೃಷ್ಣಮೂರ್ತಿ ವಾಗ್ದಾಳಿ ನೆಡೆಸಿದರು.