ಸುನೀಲ್ ಗೆಲುವಿಗೆ ಶಕ್ತಿಯನ್ನು ಧಾರೆ ಎರೆಯುವೆಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಆಕಾಂಕ್ಷಿಯಾಗಿ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೆ. ನಾಯಕರು ಮತ್ತು ಪಕ್ಷದ ತೀರ್ಮಾನದಿಂದ ಅವಕಾಶ ಸಿಗಲಿಲ್ಲ, ಬೇಸರವಿಲ್ಲದೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಗೆಲ್ಲಿಸಲು ಶಕ್ತಿಯನ್ನು ಧಾರೆ ಎರೆಯುವ ಕೆಲಸ ಮಾಡುವೆ ಎಂದು ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ತಿಳಿಸಿದರು.