ಡಾ.ಶಿವಕುಮಾರ ಸ್ವಾಮೀಜಿ ೧೧೭ ನೇ ಜಯಂತಿ ಆಚರಣೆಲೋಕ ಕಲ್ಯಾಣಕ್ಕಾಗಿ ದಣಿವರಿಯದೆ ತಮ್ಮ ಬದುಕನ್ನೇ ಮುಡುಪಾಗಿಟ್ಟು ಸಿದ್ದಗಂಗೆಯನ್ನು ಅಕ್ಷರಶಃ ಶಿಕ್ಷಣ ಕಾಶಿಯನ್ನಾಗಿಸಿ ವಿಶ್ವ ವಿಖ್ಯಾತಗೊಳಿಸಿದ ತ್ರಿವಿಧ ದಾಸೋಹಿ, ಕಾಯಕ ಯೋಗಿ, ನಡೆದಾಡುವ ದೇವರು ಎಂದೇ ನಾಡಿನ ಉದ್ದಗಲಕ್ಕೂ ಪ್ರಸಿದ್ಧರಾಗಿದ್ದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ೧೧೭ ನೇ ಜಯಂತಿಯನ್ನು ನಗರದ ವಿವಿಧೆಡೆ ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.