ಸಾಂದರ್ಭಿಕ ಸಾಕ್ಷ ಆಧಾರದಲ್ಲಿ ಭ್ರಷ್ಟಾಚಾರ ರುಜುವಾತು ಸಾಧ್ಯಗುಂಡ್ಲುಪೇಟೆ ವಾಣಿಜ್ಯ ತೆರಿಗೆ ಚೆಕ್‌ಪೋಸ್ಟ್‌ನಲ್ಲಿ ಹಾದು ಹೋಗುವ ವಾಹನಗಳಿಂದ ಲಂಚ ಪಡೆದ ವಾಣಿಜ್ಯ ತೆರಿಗೆ ಆಧಿಕಾರಿ ಮತ್ತು ಗ್ರೂಪ್ ‘ಡಿ’ ನೌಕರನಿಗೆ ವಿಶೇಷ ನ್ಯಾಯಾಲಯ ವಿಧಿಸಿದ್ದ ನಾಲ್ಕು ವರ್ಷಗಳ ಶಿಕ್ಷೆ ಎತ್ತಿ ಹಿಡಿದಿರುವ ಹೈಕೋರ್ಟ್, ಭ್ರಷ್ಟಾಚಾರ ಪ್ರಕರಣದಲ್ಲಿ ಸಾಕ್ಷಿಗಳು ಪ್ರತಿಕೂಲ ಹೇಳಿಕೆ ನೀಡಿದ್ದರೂ, ಸಾಂದರ್ಭಿಕ ಸಾಕ್ಷ್ಯಗಳ ಆಧಾರದಲ್ಲಿ ರುಜುವಾತು ಮಾಡಬಹುದು ಎಂದು ಅಭಿಪ್ರಾಯಪಟ್ಟಿದೆ.