ಎನ್ಡಿಎ ಪರ್ಯಾಯವಾಗಿ ಎಸ್ಯುಸಿಐ ಸ್ಪರ್ಧೆ೨೦೨೪ರ ಲೋಕಸಭಾ ಚುನಾವಣೆ ಸನ್ನಿಹಿತವಾಗಿದೆ. ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷ ಇವರ ವಿರುದ್ಧ ಪರ್ಯಾಯವಾಗಿ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ನಡೆಸುತ್ತಿದೆ ಎಂದು ರಾಜ್ಯ ಸಮಿತಿ ಸದಸ್ಯ ಬಿ. ರವಿ ಹೇಳಿದರು.